ರಾಜ್ಯ

ನನಗೂ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ- ಮಲ್ಲಿಕಾರ್ಜುನ ಖರ್ಗೆ

ನನಗೂ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನನಗೂ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ- ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Published On :

ಕಲಬುರಗಿ: ನನಗೂ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

 ಕಲಬುರಗಿಯಲ್ಲಿಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ನಾನು ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಆದರೆ. ತಮ್ಮಗೂ ಕೂಡಾ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿಸಿದರು.

ಕಳೆದ ಒಂದೂವರೆ ತಿಂಗಳುಗಳಿಂದ ಇಂತಹ ಕರೆಗಳು ಬರುತ್ತಿದ್ದು, ಕೇಂದ್ರ ಗೃಹ ಸಚಿವರು ಹಾಗೂ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಗಮನಕ್ಕೂ ತಂದಿದ್ದೇನೆ. ಈ ಸಂಬಂಧ ದೆಹಲಿಯ ತುಘಲಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಹೇಳಿದರು.

ಯಾವುದೇ ಬೆದರಿಕೆ ಕರೆಗಳು ಬಂದರೂ ತಮ್ಮ ಜೀವ ಇರುವವರೆಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಮುಂದುವರೆಸುವುದಾಗಿ ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.