ಬಿಸಿಲ ಬೇಗೆಗೆ ತತ್ತರಿಸುತ್ತಿರುವ ಜನತೆಗೆ ಕೊಂಚ ನಿರಾಳ: ರಾಜ್ಯದ ಕೆಲವೆಡೆ ಈ ವಾರ ಮಳೆ ಸಾಧ್ಯತೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಲೇ ಇದ್ದು, ಬಿಸಿಲ ತಾಪಕ್ಕೆ ತತ್ತರಿಸುತ್ತಿರುವ ಜನತೆಗೆ ಕೊಂಚ ನಿರಾಳ ಎದುರಾಗಲಿದ್ದು, ವಾರದೊಳಗಾಗಿ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಸೋಮವಾರ ಮಾಹಿತಿ ನೀಡಿದೆ...

Published On :
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಲೇ ಇದ್ದು, ಬಿಸಿಲ ತಾಪಕ್ಕೆ ತತ್ತರಿಸುತ್ತಿರುವ ಜನತೆಗೆ ಕೊಂಚ ನಿರಾಳ ಎದುರಾಗಲಿದ್ದು, ವಾರದೊಳಗಾಗಿ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಸೋಮವಾರ ಮಾಹಿತಿ ನೀಡಿದೆ.
ಹಿಂದೂ ಮಹಾಸಾಗರ ಮತ್ತು ಬಂಗಾಳದ ನೈಋತ್ಯ ಕೊಲ್ಲಿಯಲ್ಲಿ ಸೈಕ್ಲೋನ್ ಎದುರಾಗುತ್ತಿದ್ದು, ಇದರ ಪರಿಣಾಮ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ನಗರದ ಭಾರತೀಯ ಹವಾಮಾನ ಕೇಂದ್ರದ ನಿರ್ದೇಶಕ ಎಂ. ಸುಂದರ್ ಮೆತ್ರಿ ಅವರು, ಕರ್ನಾಟಕ ದಕ್ಷಿಣ ಭಾಗ ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಮಾ,14 ರಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲದೇ ಹೋದರು, ಮೋಡ ಕವಿದ ವಾತಾವರಣ ಹಾಗೂ ಗುಡುಗು, ಮಿಂಚು ಕಾಣಿಸಿಕೊಳ್ಳಲಿದೆ. ಮಾ.15 ರ ಬಳಿಕ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಚಾಮರಾಜನಗರ, ಹಾಸನ, ಶಿವಮೊಗ್ಗ, ಮೈಸೂರು ಹಾಗೂ ಉಡುಪಿ ಸೇರಿದಂತೆ ಇನ್ನತರೆ ನಗರಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಸಮುದ್ರದ ಹತ್ತಿರ ಸುಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಒತ್ತಡಗಳು ಹೆಚ್ಚಾಗುತ್ತಿರುವುದರಿಂದ ಸಮುದ್ರದ ಅಲೆಗಳು ದೊಡ್ಡ ಮಟ್ಟದಲ್ಲಿ ಅಪ್ಪಳಿಸಲಿದ್ದು ಈ ಹಿನ್ನೆಲೆಯಲ್ಲಿ ಮೂರು ದಿನಗಳವರೆಗೂ ಸಮುದ್ರದತ್ತ ಸುಳಿಯದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಕರಾವಳಿ ತೀರ ಪ್ರದೇಶಗಳಲ್ಲಿ ದೋಣಿಗಳಲ್ಲಿರುವ ಜನರಿಗೂ ಹಿಂದಕ್ಕೆ ಬರುವಂತೆ ಸೂಚಿಸಲಾಗಿದೆ. ಅಪಾಯ ಎದುರಾದಾಗ ರಕ್ಷಣೆ ಮಾಡಿಕೊಳ್ಳುವ ಸಲುವಾಗಿ, ಗುಂಪು ಸೇರಿ ದೋಣಿಗಳಿಂದ ಹಿಂದಕ್ಕೆ ಬರುವಂತೆ ಸೂಚಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


