ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ತಡೆ ಮುಂದುವರಿಕೆ
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತ ನ್ಯಾಯ ಮಂಡಳಿ(ಸಿಎಟಿ) ನೀಡಿರುವ ತಡೆಯಾಜ್ಞೆ ಇದೇ ತಿಂಗಳ 21ರ ವರೆಗೆ ಮುಂದುವರಿಯಲಿದೆ.

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತ ನ್ಯಾಯ ಮಂಡಳಿ(ಸಿಎಟಿ) ನೀಡಿರುವ ತಡೆಯಾಜ್ಞೆ ಇದೇ ತಿಂಗಳ 21ರ ವರೆಗೆ ಮುಂದುವರಿಯಲಿದೆ.
ಪ್ರಕರಣಕ್ಕೆ ಸಂಬಂಧಿಸಿದ ಆದೇಶವನ್ನು ಸಿಎಟಿ ಮಾರ್ಚ್ 21ಕ್ಕೆ ಕಾಯ್ದರಿಸಿದೆ.
ಅವಧಿಗೂ ಮುನ್ನ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ರೋಹಿಣಿ ಮಾರ್ಚ್ 8 ರಂದು ಸಿಎಟಿ ಮೊರೆ ಹೋಗಿದ್ದರು. ರಾಜ್ಯ ಸರ್ಕಾರದ ಆದೇಶಕ್ಕೆ ಸಿಎಟಿ ಮಾರ್ಚ್ 13ರ ವರೆಗೆ ತಡೆ ನೀಡಿತ್ತು.
ಮತ್ತೊಂದೆಡೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ ವರ್ಗಾವಣೆಗೂ ಸಿಎಟಿ ತಡೆ ನೀಡಿದೆ. ತಮ್ಮ ದಿಢೀರ್ ವರ್ಗಾವಣೆ ಪ್ರಶ್ನಿಸಿ ಅನೂಪ್ ಶೆಟ್ಟಿ, ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು.
ಒಂದು ವರ್ಷಕ್ಕೂ ಮುನ್ನ ವರ್ಗಾವಣೆ ಮಾಡಲಾಗಿದೆ. ಇದು ನಿಯಮಬಾಹಿರ ಎಂದು ಅನೂಪ್ ಶೆಟ್ಟಿ ಅವರು ಅರ್ಜಿಯಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅನೂಪ್ ವರ್ಗಾವಣೆಗೆ ನ್ಯಾಯಮಂಡಳಿ ತಡೆ ನೀಡಿದ್ದು, ಮಾರ್ಚ್ 22 ರಂದು ಮುಂದಿನ ವಿಚಾರಣೆ ನಡೆಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


