ರಾಜ್ಯ

ಕುಮಾರಸ್ವಾಮಿ ಆಡಳಿತದ ಬಗ್ಗೆ ಚಾರ್ಜ್ ಶೀಟ್ ನೀಡಲು ಸಾಧ್ಯವಿಲ್ಲ: ಎಚ್.ಡಿ.ದೇವೇಗೌಡ

ಬಿಜೆಪಿ, ಕಾಂಗ್ರೆಸ್ ಪಕ್ಷದವರು ಪರಸ್ಪರ ಆರೋಪ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಆದರೆ ಕುಮಾರಸ್ವಾಮಿ ನಡೆಸಿದ್ದ 20 ತಿಂಗಳ ಆಡಳಿತದ ಬಗ್ಗೆ ಆರೋಪ ಪಟ್ಟಿ ಬಿಡುಗಡೆ ಮಾಡಲು ಯಾರಿಂದಲ್ಲೂ ಸಾಧ್ಯವಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

ಕುಮಾರಸ್ವಾಮಿ ಆಡಳಿತದ ಬಗ್ಗೆ  ಚಾರ್ಜ್ ಶೀಟ್ ನೀಡಲು ಸಾಧ್ಯವಿಲ್ಲ: ಎಚ್.ಡಿ.ದೇವೇಗೌಡ
ಎಚ್. ಡಿ. ದೇವೇಗೌಡ
Published On :

ಬೆಂಗಳೂರು: ಬಿಜೆಪಿ, ಕಾಂಗ್ರೆಸ್ ಪಕ್ಷದವರು ಪರಸ್ಪರ ಆರೋಪ ಪಟ್ಟಿ  ಬಿಡುಗಡೆ ಮಾಡಿದ್ದಾರೆ. ಆದರೆ ಕುಮಾರಸ್ವಾಮಿ ನಡೆಸಿದ್ದ 20 ತಿಂಗಳ ಆಡಳಿತದ ಬಗ್ಗೆ ಚಾರ್ಜ್ ಶೀಟ್ ಬಿಡುಗಡೆ ಮಾಡಲು ಯಾರಿಂದಲ್ಲೂ ಸಾಧ್ಯವಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.  

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ಗೆಳೆಯರ ಬಳಗ ವೃತ್ತದಲ್ಲಿ ಇಂದು ನಡೆದ ‘ವಿಕಾಸ ಪರ್ವ’ ಪಾದಯಾತ್ರೆಯಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ  ಕಡಿಮೆ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರು ಎಂದು ತಿಳಿಸಿದರು.

ನೈಸ್ ಯೋಜನೆಯನ್ನೇ ಸರ್ಕಾರದ ಸುಪರ್ದಿಗೆ ಪಡೆಯಲು ಕುಮಾರಸ್ವಾಮಿ ಮುಂದಾಗಿದ್ದರು. ಇದ್ಯಾವುದಕ್ಕೂ ಬಿಜೆಪಿ ಬೆಂಬಲ ಕೊಡಲಿಲ್ಲ ಎಂದರು. ಬೆಂಗಳೂರಿನ ನಾಗರಿಕರಿಗೆ ಪ್ರಬುದ್ಧತೆ ಇದೆ. ರಾಜ್ಯದ ರಾಜಕಾರಣ ಅರ್ಥಮಾಡಿಕೊಳ್ಳುವ ಶಕ್ತಿ ಇದೆ ಎಂದರು.  

2007ರಲ್ಲಿ ಕಾವೇರಿ ವಿಚಾರದಲ್ಲಿ ನಮಗೆ ವ್ಯತಿರಿಕ್ತ ತೀರ್ಪು ಬಂದಾಗ ನಾನು ಹೋರಾಟ ಮಾಡಿದ್ದೆ. ಈಗ ತೀರ್ಪು ಬಂದಾಗ ಮುಖ್ಯಮಂತ್ರಿ ಸೇರಿದಂತೆ ಸಚಿವರು ಸಿಹಿ ಹಂಚಿ ಸಂಭ್ರಮಿಸುತ್ತಾರೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದರು.

‘ಹ್ಯಾರೀಸ್ ಮಗ ನಲಪಾಡ್ ಹಲ್ಲೆ ಮಾಡಿದ ರೀತಿಯಲ್ಲೇ ಮಾಗಡಿಯಲ್ಲಿ ಜೆಡಿಎಸ್ ಪುರಸಭಾ ಸದಸ್ಯನ ಮೇಲೆ ಹಲ್ಲೆ ಮಾಡಲಾಗಿದೆ. ಇದೆಲ್ಲ ನೋಡಿದರೆ ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದು ಗೊತ್ತಾಗುತ್ತದೆ’ ಎಂದು ರಾಜ್ಯ ಸರ್ಕಾರದ ವೈಪಲ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.