ರಾಜ್ಯ

ಮೈಸೂರು: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಹಲ್ಲೆ, 7 ಮಂದಿ ವಿರುದ್ಧ ಕೇಸು ದಾಖಲು

ಯುವಕನೊಬ್ಬನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ 19 ವರ್ಷದ ಯುವತಿ ಮೇಲೆ ಹಲ್ಲೆ ನಡೆಸಿ ಮನೆ ...

ಮೈಸೂರು: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಹಲ್ಲೆ, 7 ಮಂದಿ ವಿರುದ್ಧ ಕೇಸು ದಾಖಲು
ಸಾಂದರ್ಭಿಕ ಚಿತ್ರ
Published On :

ಮೈಸೂರು: ಯುವಕನೊಬ್ಬನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ 19 ವರ್ಷದ ಯುವತಿ ಮೇಲೆ ಹಲ್ಲೆ ನಡೆಸಿ ಮನೆ ಮೇಲೆ ದಾಳಿ ನಡೆಸಿರುವ ಘಟನೆ ಮೈಸೂರಿನ ಟಿ,ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ ನಡೆದಿದೆ.

 ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೂರು ಪೊಲೀಸರು ಯುವಕ, ಆತನ ಪೋಷಕರು, ಸಂಬಂಧಿಕರು ಸೇರಿದಂತೆ 7 ಮಂದಿ ವಿರುದ್ಧ ಕೇಸು ದಾಖಲಿಸಿದ್ದಾರೆ.

ಸಿದ್ದಮಾದಯ್ಯ ಅವರ ಪುತ್ರಿ ಸುಕನ್ಯಾ ಮೇಲೆ ಅದೇ ಗ್ರಾಮದ ಮಲ್ಲಿಕಾರ್ಜುನ ಮತ್ತು ಇತರ ಆರು ಮಂದಿ ಹಲ್ಲೆ ನಡೆಸಿದ್ದು ಯುವತಿ ಗಾಯಗೊಂಡಿದ್ದಾಳೆ. ಹಲ್ಲೆಕೋರರು ಯುವತಿಯ ಮನೆಯೊಳಗೆ ನುಗ್ಗಿ ಸುಮಾರು 85 ಸಾವಿರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಹಾಳುಗೆಡವಿದ್ದಾರೆ.

ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸುಕನ್ಯಾ, ಕಳೆದೊಂದು ವರ್ಷದಿಂದ ಮಲ್ಲಿಕಾರ್ಜುನ ನನಗೆ ಮದುವೆಯಾಗುವಂತೆ ಪೀಡಿಸುತ್ತಿದ್ದನು. ಅದಕ್ಕೆ ಸುಕನ್ಯಾ ಒಪ್ಪದಿದ್ದಾಗ ತನ್ನವರನ್ನು ಕರೆದುಕೊಂಡು ಬಂದು ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾಳೆ. ಸುಕನ್ಯಾ ಪೋಷಕರಿಗೆ ಸಹ ಮಗಳನ್ನು ಮಲ್ಲಿಕಾರ್ಜುನ್ ಗೆ ಮದುವೆ ಮಾಡಿಕೊಡುವುದು ಇಷ್ಟವಿರಲಿಲ್ಲ.

ಈ ಮಧ್ಯೆ ಸುಕನ್ಯಾ ಪೋಷಕರು ಬೇರೆ ಹುಡುಕನನ್ನು ಹುಡುಕುತ್ತಿದ್ದರು. ಇದನ್ನು ತಿಳಿದ ಮಲ್ಲಿಕಾರ್ಜುನ ತನ್ನ ಪೋಷಕರಾದ ಸಿದ್ದಯ್ಯ ಮತ್ತು ಮಹದೇವಮ್ಮ, ಸೋದರಿಯರಾದ ಭಾರತಿ ಮತ್ತು ಸುಮತ್ರಿ ಹಾಗೂ ಭಾವಂದಿರ ಜೊತೆ ಸುಕನ್ಯಾ ಮನೆಗೆ ಬಂದು ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.