ಮೈಸೂರು ಸಮೀಪ ಸರಣಿ ಅಪಘಾತ: ಆರು ಮಂದಿ ಸಾವು
ಮೈಸೂರು - ಟಿ.ನರಸೀಪುರ ರಸ್ತೆಯಲ್ಲಿ ಎರಡು ಖಾಸಗಿ ಬಸ್ಸುಗಳು ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಸರಣಿ....

Published On :
ಮೈಸೂರು: ಮೈಸೂರು - ಟಿ.ನರಸೀಪುರ ರಸ್ತೆಯಲ್ಲಿ ಎರಡು ಖಾಸಗಿ ಬಸ್ಸುಗಳು ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.
ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 766ರ ಚಿಕ್ಕಳ್ಳಿಯ ದೊಡ್ಡ ಆಲದಮರದ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಐವರ ಪೈಕಿ ನಾಲ್ಕು ಮಂದಿ ಸೇರಿದಂತೆ ಉದಯರಂಗ ಬಸ್ ಚಾಲಕ ಹಾಗೂ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಉದಯರಂಗ ಮತ್ತು ಡಿಪಿಎಸ್ ಬಸ್‌ಗಳು ಟಿ. ನರಸೀಪುರದಿಂದ ಮೈಸೂರಿನತ್ತ ಬರುತ್ತಿದ್ದವು. ಎರಡು ಬಸ್ಸುಗಳು ಒಂದನ್ನೊಂದು ಹಿಂದಿಕ್ಕುವ ಭರದಲ್ಲಿ ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಸಿದ್ಧಾರ್ಥ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


