ರಾಜ್ಯ

ಮುಷ್ಕರ ಬೆದರಿಕೆ: ಬೇರೆ ರಾಜ್ಯಗಳ ಮೆಟ್ರೋ ನೆರವು ಪಡೆಯಲು ಬಿಎಂಆರ್‏ಸಿಎಲ್ ಯತ್ನ

ವೇತನ ಪರಿಷ್ಕರಣೆ, ಬಡ್ತಿ, ಕನ್ನಡಿಗ ನೌಕರರು ಹಾಗೂ ಹಿಂದಿ ನೌಕರರ ನಡುವೆ ತಾರತಮ್ಯಕ್ಕೆ ಕಡಿವಾಣ ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಮ್ಮ ಮೆಟ್ರೋ ನೌಕರರು ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಇತರೆ ರಾಜ್ಯಗಳ ನೆರವು...

ಮುಷ್ಕರ ಬೆದರಿಕೆ: ಬೇರೆ ರಾಜ್ಯಗಳ ಮೆಟ್ರೋ ನೆರವು ಪಡೆಯಲು ಬಿಎಂಆರ್‏ಸಿಎಲ್ ಯತ್ನ
ಸಂಗ್ರಹ ಚಿತ್ರ
Published On :
ಬೆಂಗಳೂರು: ವೇತನ ಪರಿಷ್ಕರಣೆ, ಬಡ್ತಿ, ಕನ್ನಡಿಗ ನೌಕರರು ಹಾಗೂ ಹಿಂದಿ ನೌಕರರ ನಡುವೆ ತಾರತಮ್ಯಕ್ಕೆ ಕಡಿವಾಣ ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಮ್ಮ ಮೆಟ್ರೋ ನೌಕರರು ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಇತರೆ ರಾಜ್ಯಗಳ ನೆರವು ಪಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ ಯತ್ನ ನಡೆಸುತ್ತಿದೆ. 
ಸಿಬ್ಬಂದಿಗಳು ಮುಷ್ಕರ ನಡೆಸುವ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಭದ್ರತೆ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. 
ಸಿಬ್ಬಂದಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಎಂಆರ್'ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಅವರು, ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರೈಲು ಆಪರೇಟರ್ಸ್ ಗಳಿಗಾಗಿ ದೇಶದ ಇತರೆ ಮೆಟ್ರೋಗಳಿಗೆ ಪತ್ರವನ್ನು ಬರೆಯಲಾಗುತ್ತಿದೆ. ನಮ್ಮಲ್ಲಿ ಈಗಾಗಲೇ 60 ಅಧಿಕಾರಿಗಳಿದ್ದು, ಅವರಿಗೆ ಈಗಾಗಲೇ ರೈಲು ನಿರ್ವಹಣೆಯ ತರಬೇತಿಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. 
ಇದಲ್ಲದೆ ಮಾ,9ರಂದು ಗೃಹ ಕಾರ್ಯದರ್ಶಿಗಳಿಗೂ ಪತ್ರ ಬರೆದಿರುವ ಬಿಎಂಆರ್'ಸಿಎಲ್, ಪರಿಸ್ಥಿತಿ ನಿಭಾಯಿಸಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸುವಂತೆ ಮನವಿ ಮಾಡಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.