ವೆಂಕಟೇಶ ಮೂರ್ತಿ, ಬರಗೂರು, ಮನು ಬಳಿಗಾರ್ ಗೆ ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪುರಸ್ಕಾರ
ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ನೀಡುವ ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಾದಂಬರಿ, ಕಥಾ ಪ್ರಶಸ್ತಿಗಳು ಘೋಷಣೆಯಾಗಿದೆ.

Published On :
ಬೆಳಗಾವಿ: ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ನೀಡುವ ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಾದಂಬರಿ, ಕಥಾ ಪ್ರಶಸ್ತಿಗಳು ಘೋಷಣೆಯಾಗಿದೆ.
2017–18ನೇ ಸಾಲಿನ ಪ್ರಶಸ್ತಿಗಳು ಘೋಷಣೆಯಾಗಿದ್ದು ಕಾವ್ಯ ಪುರಸ್ಕಾರಕ್ಕೆ ಕವಿ ಎಚ್.ಎಸ್. ವೆಂಕಟೇಶಮೂರ್ತಿ, ಕಾದಂಬರಿ ಪ್ರಶಸ್ತಿಗೆ ಬರಗೂರ ರಾಮಚಂದ್ರಪ್ಪ ಹಾಗೂ ಕಥಾ ಪುರಸ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಆಯ್ಕೆಯಾಗಿದ್ದಾರೆ.
ಎಲ್ಲಾ ಪ್ರಶಸ್ತಿಗಳೂ 50 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಹೊಂದಿರಲಿದೆ.
ಬೆಟಗೇರಿ ಕೃಷ್ಣಶರ್ಮ ಅವರ ಜನ್ಮ ದಿನವಾದ ಏ..16ರಂದು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಗುತ್ತದೆ. ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಚಂದ್ರಶೇಖರ ಕಂಬಾರ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿಗಳ ಪ್ರಧಾನ ಮಾಡಲಿದ್ದಾರೆ ಎಂದು ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ರಾಘವೇಂದ್ರ ಪಾಟೀಲ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬರಗೂರು ರಾಮಚಂದ್ರಪ್ಪbaraguru ramachandrappaವೆಂಕಟೇಶ್ ಮೂರ್ತಿManu Baligarಮನು ಬಳಿಗಾರ್Betageri KrishnasharmaVenkatesha Mrtyಬೆಟಗೆರಿ ಕೃಷ್ಣಶರ್ಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


