ಕೇರಳದಲ್ಲಿ ಚಂಡಮಾರುತ ಪರಿಣಾಮ; ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ
ಕೇರಳದಲ್ಲಿ ಬೀಸುತ್ತಿರುವ ಭಾರಿ ಚಂಡಮಾರುತದ ಪರಿಣಾಮದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ.

Published On :
ಬೆಂಗಳೂರು: ಕೇರಳದಲ್ಲಿ ಬೀಸುತ್ತಿರುವ ಭಾರಿ ಚಂಡಮಾರುತದ ಪರಿಣಾಮದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ.
ವಾಯುಭಾರ ಕುಸಿತದಿಂದ ಉಂಟಾಗುವ ಚಂಡಮಾರುತವು ಪ್ರಸ್ತುತ ಗಂಟೆಗೆ 20 ಕಿಲೋಮೀಟರ್ ವೇಗದಲ್ಲಿ ಅರಬ್ಬಿ ಸಮುದ್ರದತ್ತ ಚಲಿಸುತ್ತಿದೆ. ತಿರುವನಂತಪುರದಿಂದ 390 ಕಿಲೋ ಮೀಟರ್ ನೈಋುತ್ಯದಲ್ಲಿ ಕಾಸರಗೋಡು ತನಕ ಸಮುದ್ರದಲ್ಲಿ ಬಲಗೊಳ್ಳುವ ಸಾಧ್ಯತೆ ಇದ್ದು, ಇದರ ಫಲವಾಗಿ ತಿರುವನಂತಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ನಿನ್ನೆ ಸಂಜೆ ವೇಳೆ ಬೆಂಗಳೂರಿನಲ್ಲಿ ಸುರಿದಿದ್ದ ಭಾರಿ ಮಳೆ ಇಂದು ಸಂಜೆಯೂ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಇದರಿಂದ ಸಂಜೆ ವೇಳೆ ಕಚೇರಿಯಿಂದ ಮನೆಗೆ ತೆರಳುವವರು ಸಾಕಷ್ಟು ಪರದಾಡಬೇಕಾಯಿತು.
ತುಂತುತು ಮಳೆಯಿಂದಾಗಿ ಸಾರಿಗೆ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು. ಎಂ.ಜಿ. ರಸ್ತೆ. ಶಿವಾನಂದ ಸರ್ಕಲ್, ಬಸವನಗುಡಿ, ಚಾಮರಾಜಪೇಟೆ, ಮಲ್ಲೇಶ್ವರ ಸೇರಿದಂತೆ ಹಲವಾರು ಭಾಗಗಳಲ್ಲಿ ಮಳೆಯಾಗಿದ್ದು, ಬೈಕ್ ಸವಾರರು ಪರದಾಡುವಂತಾಗಿತ್ತು. ನಗರದ ಹಲವೆಡೆ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ಥವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


