ಹುಟ್ಟಹಬ್ಬ ಪಾರ್ಟಿಗೆ ಹೋಗೊದು ಬೇಡ ಎಂದ ತಾಯಿ ಮಾತಿನಿಂದ ಬೇಸತ್ತ ಮಗಳು ಆತ್ಮಹತ್ಯೆ
ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾಯಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮಗಳೊರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಪೇಗೌಡ ನಗರದಲ್ಲಿ ನಡೆದಿದೆ.

ಬೆಂಗಳೂರು : ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾಯಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮಗಳೊರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಪೇಗೌಡ ನಗರದಲ್ಲಿ ನಡೆದಿದೆ.
ಆರ್ಪಿತಾ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ನಂಜಪ್ಪ ಲೇಔಟ್ ನಿವಾಸಿಯಾದ ಈಕೆ ಬನಶಂಕರಿಯ ಖಾಸಗಿ ಕಾಲೇಜ್ ವೊಂದರಲ್ಲಿ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಸ್ನೇಹಿತೆಯ ಹುಟ್ಟುಹಬ್ಬವೊಂದರಲ್ಲಿ ಪಾಲ್ಗೊಳ್ಳಬೇಕೆಂದು ಆರ್ಪಿತಾ ಆಕೆಯ ತಾಯಿ ಚಂದ್ರಿಕಾ ಅವರನ್ನು ಕೇಳಿದ್ದಾಳೆ. ಆದರೆ, ಚಂದ್ರಿಕಾ ಹುಟ್ಟುಹಬ್ಬಕ್ಕೆ ಹೋಗಬಾರದು, ಪರೀಕ್ಷೆಗೆ ತಯಾರಾಗು ಎಂದು ಸಲಹೆ ನೀಡಿದ್ದಾರೆ.
ಇದರಿಂದ ಬೇಸತ್ತ ಆರ್ಪಿತಾ ಮನೆಯ ಮೊದಲ ಮಹಡಿಯಲ್ಲಿರುವ ಕೊಠಡಿಗೆ ಹೋಗಿ ನೇಣುಬಿಗಿದುಕೊಂಡಿದ್ದಾಳೆ. ಈಕೆಯ ತಾಯಿ ಹೋಗಿ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಪ್ರತಿಕ್ರಿಯೆ ಕಂಡುಬಂದಿಲ್ಲ. ನಂತರ ಬಾಗಿಲು ಒಡೆದು ನೋಡಿದ್ದಾಗ ಆಕೆ ನೇಣುಬಿಗಿದುಕೊಂಡಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಬದುಕುಳಿಯಲಿಲ್ಲ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


