ತುಮಕೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಎಸಿಬಿ ದಾಳಿ: ಕಡತಗಳ ಪರಿಶೀಲನೆ
ತುಮಕೂರು, ಚಿತ್ರದುರ್ಗ, ಧಾರವಾಡ ಸೇರಿದಂತೆ ರಾಜ್ಯದ ನಾನಾ ಕಡೆ ಬೆಳ್ಳಂಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Published On :
ಬೆಂಗಳೂರು: ತುಮಕೂರು, ಚಿತ್ರದುರ್ಗ, ಧಾರವಾಡ ಸೇರಿದಂತೆ ರಾಜ್ಯದ ನಾನಾ ಕಡೆ ಬೆಳ್ಳಂಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತುಮಕೂರಿನ ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ ಮನೆ, ಕಛೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಇದೇ ವೇಳೆ ಎಸಿ ತಿಪ್ಪೇಸ್ವಾಮಿಯವರ ಚಿತ್ರದುರ್ಗದ ನಿವಾಸದ ಮೇಲೆ ಸಹ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಳಗಾವಿಯಲ್ಲಿ ಎಇಇ ಕಿರಣ್ ಸುಬ್ಬರಾವ್ ಭಟ್ ಮನೆ, ಕಾರಾಂಜಾ ನೀರಾವರಿ ಯೋಜನೆಯ ಎಇಇ ವಿಜಯ್ಕುಮಾರ್ ಅವರ ಕಲಬುರಗಿ ಜಿಲ್ಲೆಯ ಭಗವತಿ ನಗರದಲ್ಲಿರುವ ಮನೆ,ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಧಾರವಾಡದಲ್ಲಿ ಶ್ರೀಪತಿ ದೊಡ್ಡಲುಂಗಣ್ಣನವರ್,ದಾವಣಗೆರೆಯಲ್ಲಿ ದೂಡಾ ಜಂಟಿ ನಿರ್ದೇಶಕ ಮನೆ, ಕಚೇರಿ, ಮಹಾನಗರ ಪಾಲಿಕೆ, ನಿರ್ದೇಶಕ ಗೋಪಾಲಕೃಷ್ಣ ಅವರ ಮೇಲೆ ಸಹ ಎಸಿಬಿ ಅಧಿಕಾರಿಗಳು ದಾಳಿನಡೆಸಿದ್ದಾರೆ. ಎನ್ನುವ ಮಾಹಿತಿ ಇದೆ.
ಎಸಿಬಿ ಡಿವೈಎಸ್ಪಿ ವೀರೇಶ್, ಎಸಿಬಿ ಡಿವೈಎಸ್ಪಿ ವಾಸು ದೇವರಾಮ, ಸಿಎಸ್ ಪಿ.ಜೆ.ರಘು ನೇತೃತ್ವದಲ್ಲಿ ದಾಳಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


