ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ರೂ. ಮೊತ್ತದ ರೈತರ ಸಾಲ ಮನ್ನಾ ಮಾಡಿದೆ: ರಾಹುಲ್ ಗಾಂಧಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ರೂ. ರಾಜ್ಯದ ರೈತರ ಸಾಲ ಮನ್ನಾ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ರೂ. ರಾಜ್ಯದ ರೈತರ ಸಾಲ ಮನ್ನಾ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮೂರನೇ ಹಂತದ ಜನಾಶೀರ್ವಾದ ಯಾತ್ರೆ ಅಂಗವಾಗಿ ಮಂಗಳೂರಿನ ಕಾಪುವಿನಲ್ಲಿಂದು ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಲ ವರ್ಷಗಳಿಂದ ಬಿಜೆಪಿ ಸರ್ಕಾರ 15 ಶ್ರೀಮಂತರ 2.5 ಲಕ್ಷ ಕೋಟಿ ರೂ. ಮನ್ನಾ ಮಾಡಿದೆ ಎಂದು ಆರೋಪಿಸಿದರು.
ರೈತರ ಸಾಲ ಮನ್ನಾ ಮಾಡಿ ಎಂದು ಪ್ರಧಾನಿ ನರೇಂದ್ರಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಕೇಳಿದರೆ , ಅದು ಕೇಂದ್ರ ಸರ್ಕಾರದ ನೀತಿ ಅಲ್ಲ ಎಂದು ಹೇಳುತ್ತಾರೆ ಎಂದು ಟೀಕಿಸಿದರು.
ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಹಣ ಹಾಕುವುದಾಗಿ , ಪ್ರತಿವರ್ಷ 2 ಲಕ್ಷ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ಇದಕ್ಕೂ ಮುನ್ನ ಉಡುಪಿಯಲ್ಲಿ ಮೀನುಗಾರರ ಸಮುದಾಯಗಳೊಂದಿಗೆ ಚರ್ಚೆ ನಡೆಸಿದ ರಾಹುಲ್ ಗಾಂಧಿ, ರಾಜೀವ್ ಗಾಂಧಿ ರಾಜಕೀಯ ಶಿಕ್ಷಣ ಅಂತಾರಾಷ್ಟ್ರೀಯ ಅಕಾಡೆಮಿ ಉದ್ಘಾಟಿಸಿದರು. ಹೆಜ್ಜಾಡಿಯ ನಾರಾಯಣಗುರು ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


