ವಿಧಾನಸಭೆ ಚುನಾವಣೆ: ಮಧ್ಯಪ್ರವೇಶಿಸಲು ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮನವಿ
ಕೇಂದ್ರ ಸರ್ಕಾರ ತನ್ನ ರಾಜಕೀಯ ಲಾಭಗಳಿಗಾಗಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮುಂತಾದ ಎಜೆನ್ಸಿಗಳನ್ನು ದುರುಪಯೋಗ ...

Published On :
ಬೆಂಗಳೂರು: ಕೇಂದ್ರ ಸರ್ಕಾರ ತನ್ನ ರಾಜಕೀಯ ಲಾಭಗಳಿಗಾಗಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮುಂತಾದ ಎಜೆನ್ಸಿಗಳನ್ನು ದುರುಪಯೋಗ ಪಡಸಿಕೊಳ್ಳುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಐಟಿ, ಇಡಿ ಹಾಗೂ ಸಿಬಿಐ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳದಂತೆ ಚುನಾವಣಾ ಆಯೋಗ ನಿರ್ದೇಶನ ನೀಡುವಂತೆ ಆಗ್ರಹಿಸಿರುವ ಕೆಪಿಸಿಸಿ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಮಧ್ಯಪ್ರವೇಶಿಸುವಂತೆ ಕೋರಿದೆ.
2018ರ ಕರ್ನಾಟಕ ವಿಧಾನಸಭೆ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಾದರೇ ಆದಾಯ ತೆರಿಗೆ ಇಲಾಖೆಯ ತನಿಕಾ ವಿಭಾಗದ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಮನವಿ ಮಾಡಿದೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಗಳು ಹೆಚ್ಚೆಚ್ಚು ನಡೆಯುತ್ತಿವೆ ಎಂದು ಭಾರತೀಯ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಬರೆದಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


