ರಾಜ್ಯ

ಶೃಂಗೇರಿ ಮಠದ ಶಾರದಾಂಬ ದೇವಾಲಯದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ

ಜನಾಶೀರ್ವಾದ ಯಾತ್ರೆಯ ಮೂರನೇ ಹಂತದಲ್ಲಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದುಶೃಂಗೇರಿಯ ಶಾರಾದಾ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು..

ಶೃಂಗೇರಿ ಮಠದ ಶಾರದಾಂಬ ದೇವಾಲಯದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ
ರಾಹುಲ್ ಗಾಂಧಿ, ಶೃಂಗೇರಿ ಮಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿಗಳವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು.
Published On :

ಚಿಕ್ಕಮಗಳೂರು: ಜನಾಶೀರ್ವಾದ ಯಾತ್ರೆಯ ಮೂರನೇ ಹಂತದಲ್ಲಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಶೃಂಗೇರಿಯ ಶಾರಾದಾ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು..

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ, ವೇಣುಗೋಪಾಲ್,  ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್  ಮತ್ತಿತರರು ರಾಹುಲ್ ಗಾಂಧಿಗೆ ಸಾಥ್ ನೀಡಿದರು.

ನಂತರ ರಾಹುಲ್ ಗಾಂಧಿ, ಶೃಂಗೇರಿ ಮಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿಗಳವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶೃಂಗೇರಿ ಮಠದಲ್ಲಿನ ಮಕ್ಕಳೊಂದಿಗೆ ರಾಹುಲ್ ಗಾಂಧಿ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಅವರು "ನಾನು ಇಂದು ಶೃಂಗೇರಿ ಮಠದಲ್ಲಿ ಮಕ್ಕಳನ್ನು ಭೇಟಿ ಮಾಡಿ ಧರ್ಮದ ಅರ್ಥದ ಕುರಿತು ಪ್ರಶ್ನಿಸಿದಾಗ, ಆ ಸಣ್ಣ ಮಕ್ಕಳು ಧರ್ಮವೆಂದರೆ, "ಸತ್ಯ ಮೇವ ಜಯತೆ" ಎಂದರು. ಧರ್ಮದ ನಿಜವಾದ ಅರ್ಥ ಸಣ್ಣ ಮಕ್ಕಳು ಅರ್ಥ ಮಾಡಿಕೊಂಡಿದ್ದಾರೆ. ಆದರೆ  ನರೇಂದ್ರಮೋದಿ ಮಾತ್ರ ಹೋದಲ್ಲೆಲ್ಲಾ ಸುಳ್ಳು ಹೇಳುತ್ತಾ ತಿರುಗುತ್ತಾರೆ" ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.