ರಾಜ್ಯ

ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ: ಸಿಸಿಟಿವಿ ಕಣ್ಗಾವಲು

ರಾಜ್ಯದಾದ್ಯಂತ ಇದೇ 23 ರಿಂದ ಏಪ್ರಿಲ್‌ 6ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.54 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ....

ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ:  ಸಿಸಿಟಿವಿ ಕಣ್ಗಾವಲು
ಸಂಗ್ರಹ ಚಿತ್ರ
Published On :
ಬೆಂಗಳೂರು: ರಾಜ್ಯದಾದ್ಯಂತ ಇದೇ 23 ರಿಂದ ಏಪ್ರಿಲ್‌ 6ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.54 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಿಗಿ ಭದ್ರತೆ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಲ್ಲಿ ಪರೀಕ್ಷೆ ನಡೆಸಲು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.
ರಾಜ್ಯದಲ್ಲಿ 2,817 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. 45 ಸೂಕ್ಷ್ಮ ಮತ್ತು 23 ಅತಿ ಸೂಕ್ಷ್ಮ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಪರೀಕ್ಷಾ ದಿನದ ಮುಖ್ಯ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿಯೇ ನಡೆಸುವಂತೆ ಸೂಚಿಸಲಾಗಿದೆ. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಇರಿಸುವ ಭದ್ರತಾ ಕೊಠಡಿಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
1,806 ಪರೀಕ್ಷಾ ಕೇಂದ್ರಗಳಿಗೆ ಬೇರೆ ಸರ್ಕಾರಿ ಶಾಲೆಗಳ ಮುಖ್ಯಸ್ಥರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಲಾಗಿದೆ. ಎಂಟು ಪ್ರಥಮ ಭಾಷೆ, ಎರಡು ದ್ವಿತೀಯ ಭಾಷೆ, ಒಂಬತ್ತು ತೃತೀಯ ಭಾಷೆ, ಮೂರು ಸಾಮಾನ್ಯ ಐಚ್ಛಿಕ ವಿಷಯ, ನಾಲ್ಕು ವಿಶೇಷ ಐಚ್ಛಿಕ ವಿಷಯ, ಎರಡು ತಾಂತ್ರಿಕ ವಿಷಯ, ಐದು ಎನ್‌ಎಸ್‌ಕ್ಯೂಎಫ್‌ ವಿಷಯಗಳಲ್ಲಿ ಒಟ್ಟಾರೆ (ಏಳು ಮಾಧ್ಯಮಗಳಲ್ಲಿ) 33 ವಿಷಯಗಳಲ್ಲಿ ಪರೀಕ್ಷೆ ನಡೆಯಲಿವೆ.
3,785 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅಲ್ಲದೆ ಆಯ್ದ 9 ಪ್ರೌಢಶಾಲೆಗಳನ್ನು ಕಿರಿಯ ತಾಂತ್ರಿಕ ಶಾಲೆ ಎಂದು ಪರಿಗಣಿಸಿದ್ದು, ಇಲ್ಲಿನ 297 ವಿದ್ಯಾರ್ಥಿಗಳು ಆರು ಸಾಮಾನ್ಯ ವಿಷಯಗಳ ಜತೆಗೆ ತಾಂತ್ರಿಕ ವಿಷಯಗಳ ಪರೀಕ್ಷೆ ಬರೆಯಲಿದ್ದಾರೆ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.