ಕರ್ನಾಟಕ: ದ್ವಿತೀಯ ಪಿಯುಸಿ ಭೌತಶಾಸ್ತ್ರ, ಇಂಗ್ಲಿಷ್ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್
ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರ ಮತ್ತು ಇಂಗ್ಲಿಷ್ ನಲ್ಲಿ ಗ್ರೇಸ್ ..

ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರ ಮತ್ತು ಇಂಗ್ಲಿಷ್ ನಲ್ಲಿ ಗ್ರೇಸ್ ಅಂಕಗಳು ಸಿಗಲಿವೆ. ನಿನ್ನೆ ಇಲಾಖೆಯ ಅಧಿಕಾರಿಗಳು ಮತ್ತು ವಿಷಯ ತಜ್ಞರನ್ನೊಳಗೊಂಡ ತಜ್ಞರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.
ಇಲ್ಲಿ ವಿದ್ಯಾರ್ಥಿಗಳಿಗೆ ಗರಿಷ್ಠ 6 ಗ್ರೇಸ್ ಅಂಕಗಳು ಸಿಗಲಿವೆ. ಇಂಗ್ಲಿಷ್ ನಲ್ಲಿ ಕಡ್ಡಾಯ ಪ್ರಶ್ನೆಗಳಿಗೆ ವಿದ್ಯಾರ್ಥಿಗಳಿಗೆ ಎರಡು ಗ್ರೇಸ್ ಅಂಕಗಳು ಸಿಗಲಿವೆ. ಭೌತಶಾಸ್ತ್ರದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಆಯ್ಕೆ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿದರೆ ಅವರಿಗೆ ಹೆಚ್ಚುವರಿ 5 ಅಂಕಗಳು ಸಿಗುತ್ತವೆ ಎಂದು ಪಿಯು ಇಲಾಖೆ ನಿರ್ದೇಶಕಿ ಸಿ.ಶಿಖಾ ತಿಳಿಸಿದರು.
ವ್ಯಾಕರಣ ಲೋಪದೋಷ, ಸ್ಪೆಲ್ಲಿಂಗ್ ನಲ್ಲಿ ತಪ್ಪು ಮತ್ತು ಪ್ರಶ್ನೆ ಪತ್ರಿಕೆಯಲ್ಲಿ ಮುದ್ರಣ ದೋಷದಿಂದಾಗಿ ಗ್ರೇಸ್ ಅಂಕಗಳನ್ನು ನೀಡಲು ತೀರ್ಮಾನಿಸಲಾಯಿತು. ಮೌಲ್ಯಮಾಪನದ ಒಪ್ಪಿಗೆ ಯೋಜನೆ ಪ್ರಕಾರವೇ ಎಲ್ಲಾ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ಮೌಲ್ಯಮಾಪಕರಿಗೆ ಸೂಚಿಸಲಾಗಿದ್ದು ಉತ್ತರ ಪತ್ರಿಕೆಗಳಲ್ಲಿ ಗ್ರೇಸ್ ಅಂಕಗಳನ್ನು ನಮೂದಿಸಲಾಗುತ್ತದೆ.
ಇಲ್ಲಿಯವರೆಗೆ ಗ್ರೇಸ್ ಅಂಕಗಳನ್ನು ಮೌಲ್ಯಮಾಪನ ಮಾಡುವಾಗ ಉಪನ್ಯಾಸಕರೇ ನೀಡುತ್ತಿದ್ದರು. ಪ್ರಸ್ತುತ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಿಂದ ಹೊರಗಿನ ಪ್ರಶ್ನೆಗಳನ್ನು ಕೇಳಿದರೆ ಮತ್ತು ಅಸ್ಪಷ್ಟ ಹಾಗೂ ಅಸಮಂಜಸ ಪ್ರಶ್ನೆಗಳನ್ನು ಕೇಳಿದರೆ ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ.
ಪ್ರತಿಭಟನೆ ಹಿಂತೆಗೆದುಕೊಂಡ ಪಿಯು ಉಪನ್ಯಾಸಕರು: ಪಿಯುಸಿ ಉಪನ್ಯಾಸಕರು ಕೊನೆಗೂ ಪ್ರತಿಭಟನೆ ಹಿಂತೆಗೆದುಕೊಂಡು ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ. ಸೋಮವಾರದಿಂದ ಪ್ರತಿಭಟನೆ ನಡೆಸಲು ಯೋಜಿಸಿದ್ದರು. ಆದರೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹಾಗೂ ರಾಜ್ಯ ಪಿಯುಸಿ ಕಾಲೇಜು ಶಿಕ್ಷಕರ ಒಕ್ಕೂಟದ ನಡುವೆ ನಡೆದ ಸಭೆಯ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲು ತೀರ್ಮಾನಿಸಲಾಯಿತು. ಒಕ್ಕೂಟದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಅನೇಕ ವರ್ಷಗಳಿಂದ ಈಡೇರದಿದ್ದ ವೇತನ ಹೆಚ್ಚಳ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


