ರಾಜ್ಯ

ಕೋಲಾರ: ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ವಿದ್ಯಾರ್ಥಿ ಸೇರಿ ಮೂವರ ದುರ್ಮರಣ

ವಡಗೂರು ಗೇಟ್ ಬಳಿ ವೇಗವಾಗಿ ಬಂದ ಕಾರು ಬಸ್ ಗಾಗಿ ಕಾಯುತ್ತಾ ನಿಂತಿದ್ದ ಇಬ್ಬರು ವಿದ್ಯಾರ್ಥಿ ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ...

ಕೋಲಾರ: ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ವಿದ್ಯಾರ್ಥಿ ಸೇರಿ ಮೂವರ ದುರ್ಮರಣ
ಅಪಘಾತ
Published On :
ವಡಗೂರು(ಕೋಲಾರ): ವಡಗೂರು ಗೇಟ್ ಬಳಿ  ವೇಗವಾಗಿ ಬಂದ ಕಾರು ಬಸ್ ಗಾಗಿ ಕಾಯುತ್ತಾ ನಿಂತಿದ್ದ ಇಬ್ಬರು ವಿದ್ಯಾರ್ಥಿ ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 
ಕೆಂಬೋಡಿ ಸರ್ಕಾರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ನಾರಾಯಣಸ್ವಾಮಿ(13), ಏಳನೇ ತರಗತಿ ವಿದ್ಯಾರ್ಥಿ ಸುದರ್ಶನ್(12) ಮತ್ತು ವಡಗೂರು ಗ್ರಾಮದ 25 ವರ್ಷದ ವೆಂಕಟಪ್ಪ ಮೃತಪಟ್ಟಿದ್ದಾರೆ. 
ವಿದ್ಯಾರ್ಥಿಗಳಾದ ನಾರಯಣಸ್ವಾಮಿ ಮತ್ತು ಸುದರ್ಶನ್ ಶಾಲೆ ಮುಗಿದ ನಂತರ ಸಂಜೆ ವಡಗೂರು ಗೇಟ್ ನಲ್ಲಿ ಮನೆಗೆ ಹಿಂದಿರುಗಲು ಬಸ್ ಗಾಗಿ ಕಾಯುತ್ತಾ ನಿಂತಿದ್ದರು. ವೆಂಕಟಪ್ಪ ಬೈಕ್ ನಲ್ಲಿ ಊರಿಗೆ ಹೋಗುತ್ತಿದ್ದರು. 
ಈ ವೇಳೆ ಅದೇ ಮಾರ್ಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದು ವೆಂಕಟಪ್ಪರ ಬೈಕ್ ಗೆ ಗುದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಗಳು ಹಾಗೂ ವೆಂಕಟಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ಪ್ರಕರಣ ದಾಖಲಿಸಿಕೊಂಡಿರುವ ವಡಗೂರು ಗೇಟ್ ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.