ಬೆಂಗಳೂರು: ಮೇಲ್ಸೇತುವೆ ಮೇಲೆ ಭೀಕರ ಅಪಘಾತ- ಟೆಕ್ಕಿ ಸಾವು
ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಸಾಫ್ಟ್'ವೇರ್ ಕಂಪನಿಯ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ...

Published On :
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಸಾಫ್ಟ್'ವೇರ್ ಕಂಪನಿಯ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ.
ರಸ್ತೆ ವಿಭಜಕಕ್ಕೆ ಕಾರು ಗುದ್ದಿಸಿ ರಾಜೇಶ್ ಜಾಕೊಬ್ (33) ಎಂಬುವವರು ಮೃತಪಟ್ಟಿದ್ದಾರೆ.
ಕೆಲಸ ಮುಗಿಸಿಕೊಂಡು ರಾಜೇಶ್ ಅವರು ಎಲೆಕ್ಟ್ರಾನಿಕ್ ಸಿಟಿ ಹತ್ತಿರದ ಮತ್ತೊಂದು ಸಾಫ್ಟ್'ವೇರ್ ಕಂಪನಿಯಲ್ಲಿ ಕೆಲಸದಲ್ಲಿರುವ ಪತ್ನಿಯನ್ನು ಮನೆಗೆ ಕರೆತರಲು ತೆರಳುವಾಗ ಅಪಘಾತ ಸಂಭವಿಸಿದೆ.
ಮೇಲ್ಸೇತುವೆಯ ರಸ್ತೆ ವಿಭಜಕಕ್ಕೆ ಅವರ ಕಾರು ಡಿಕ್ಕಿಹೊಡೆದಿದ್ದು, ಕೂಡಲೇ ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ, ರಾಜೇಶ್ ಅವರ ತೆಲೆಗ ತೀವ್ರವಾಗಿ ಪೆಟ್ಟಾಗಿದ್ದ ಕಾರಣ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.
ಸಾವಿಗೀಡಾದ ರಾಜೇಶ್ ಅವರು ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿ ಆಗಿದ್ದು, ತಮ್ಮ ಕುಟುಂಬದ ಜೊತೆ ಬೀಳಕಹಳ್ಳಿಯಲ್ಲಿ ವಾಸವಾಗಿದ್ದರು. ಅವರ ಪತ್ನಿ ಸಹ ಎಲೆಕ್ಟ್ರಾನಿಕ್ ಸಿಟಿ ಸಾಪ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಪ್ರತಿನಿತ್ಯ ಕೆಲಸ ಮುಗಿಸಿ ರಾಜೇಶ್ ಅವರು, ತಮ್ಮ ಪತ್ನಿಯನ್ನು ಮನೆಗೆ ಪಿಕ್ ಅಪ್ ಮಾಡುತ್ತಿದ್ದರು. ಅದರೆ, ನಿನ್ನೆ ಸಂಜೆ ಕೂಡ ಪತ್ನಿ ಕಂಪನಿಗೆ ರಾಜೇಶ್ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruCrimeಅಪಘಾತaccidenttechieಟೆಕ್ಕಿಅಪರಾಧಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆElectronics City flyover
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


