ಚಿಕ್ಕಮಗಳೂರು: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ಎಎಸ್’ಐ ಬಂಧನ
ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸ್ ಎಎಸ್’ಐ ಓರ್ವರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದಲ್ಲಿ ನಡೆದಿದೆ.

Published On :
ಚಿಕ್ಕಮಗಳೂರು: ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸ್ ಎಎಸ್’ಐ ಓರ್ವರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದಲ್ಲಿ ನಡೆದಿದೆ.
ಎನ್.ಆರ್.ಪುರ ಪೊಲೀಸ್ ಠಾಣೆಯ ಎಎಸ್ಐ ಕುಮಾರ ನಾಯ್ಕ ಬಂಧಿತರಾಗಿದ್ದು ಇವರು ಎನ್.ಆರ್.ಪುರ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ್ದರು ಎನ್ನಲಾಗಿದೆ.
ಚುನಾವಣೆ ಸಂಬಂಧ ಕರ್ತವ್ಯಕ್ಕಾಗಿ ಗಸ್ತು ತಿರುಗಲು ಬಂದ ಬಗೆಗೆ ಸಹಿ ಪಡೆಯಲು ಹೋಗಿದ್ದ ಎಎಸ್’ಐ ಮನೆಯಲ್ಲಿ ಒಂಟಿಯಾಗಿದ್ದ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಲೀಸ್ ಎಸ್ಪಿ ಅಣ್ಣಾಮಲೈ ಮಾರ್ಗದರ್ಶನದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಆರೋಪಿ ಕುಮಾರ ನಾಯ್ಕ ಅವರನ್ನು ಸೇವೆಯಿಂದ ಅಮಾನತು ಗೊಳಿಸಿ ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚಿಕ್ಕಮಗಳೂರುChikkamagaluruASIRape attemptಎಎಸ್ಐಅತ್ಯಾಚಾರ ಪ್ರಯತ್ನNR PuraSP Annamalaiಎನ್.ಆರ್ ಪುರಎಸ್ಪಿ ಅಣ್ಣಾಮಲೈ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


