ರಾಜ್ಯ

ಮೆಟ್ರೊ ನಿಲ್ದಾಣದ ಸೌಂದರ್ಯ ಹೆಚ್ಚಿಸುವ ಪೈಂಟಿಂಗ್ ಗಳು

ನಮ್ಮ ಮೆಟ್ರೊದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಸುತ್ತಮುತ್ತಲಿನ ಸೌಂದರ್ಯಗಳನ್ನು ಆಸ್ವಾದಿಸಲು ...

ಮೆಟ್ರೊ ನಿಲ್ದಾಣದ ಸೌಂದರ್ಯ ಹೆಚ್ಚಿಸುವ ಪೈಂಟಿಂಗ್ ಗಳು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಮ್ಮ ಮೆಟ್ರೊದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಸುತ್ತಮುತ್ತಲಿನ ಸೌಂದರ್ಯಗಳನ್ನು ಆಸ್ವಾದಿಸಲು ಬಯಸುತ್ತಾರೆ. ದೇಶದ ಬೇರೆ ಮೆಟ್ರೊ ಸ್ಟೇಷನ್ ಗಳಲ್ಲಿ ಅನಪೇಕ್ಷಿತ ಜಾಹಿರಾತುಗಳು, ಗೀರು ಬರಹಗಳನ್ನು ಕಾಣಬಹುದು. ಬೆಂಗಳೂರಿನ ಮೆಟ್ರೊ ಸ್ಟೇಷನ್ ಗಳಲ್ಲಿ ವಾರಾಂತ್ಯಗಳಲ್ಲಿ ಇಂಟೆಲ್ ಇಂಡಿಯಾದ ಉದ್ಯೋಗಿಗಳು ಚಿತ್ರ ಬಿಡಿಸಿದ್ದಾರೆ. ಇವರ ಜೊತೆ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಕೂಡ ಕೈ ಜೋಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಹಲವು ಕಂಪೆನಿಗಳು, ನಾಗರಿಕ ಸಂಘಟನೆಗಳು, ಸ್ವಯಂ ಕಾರ್ಯಕರ್ತರು ಮತ್ತು ಇತರರ ಭಾಗವಹಿಸುವ ನಿರೀಕ್ಷೆಯಿದೆ. ಮೆಟ್ರೊ ನಿಲ್ದಾಣಗಳಲ್ಲಿ ಬಣ್ಣ ಬಣ್ಣದ ಚಿತ್ರಗಳನ್ನು, ಪೈಂಟಿಂಗ್ ನ್ನು ಹಚ್ಚಿ ಸುಂದರಗೊಳಿಸಲು ಇವರು ಪ್ರಯತ್ನಿಸುತ್ತಾರೆ. ಈ ಹಿಂದೆ ಕಬ್ಬನ್ ಪಾರ್ಕ್ ಮತ್ತು ಎಂ.ಜಿ.ರಸ್ತೆಗಳ ಮೆಟ್ರೊ ನಿಲ್ದಾಣಗಳಲ್ಲಿ ಈ ರೀತಿಯ ಪೈಂಟಿಂಗ್ ಗಳನ್ನು ಮಾಡಲಾಗಿತ್ತು ಎನ್ನುತ್ತಾರೆ ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯು ಎ ವಸಂತ್ ರಾವ್.

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.