ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ12 ರಂದು ಮತದಾನ
ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ 12ರಂದು ಮತದಾನ ನಡೆಯಲಿದೆ.

Published On :
ನವದೆಹಲಿ: ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ 12ರಂದು ಮತದಾನ ನಡೆಯಲಿದೆ.
ಈ ಬಗ್ಗೆ ಇಂದು ದೆಹಲಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ. 12ರಂದು ಮತದಾನ ನಡೆಯಲಿದ್ದು, ಮೇ 15ರಂದು ಮತಎಣಿಕೆ ಕಾರ್ಯ ನಡೆಯಲಿದೆ.
ಏಪ್ರಿಲ್ 17ರದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ಏಪ್ರಿಲ್ 24ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದ್ದು, ಏಪ್ರಿಲ್ 25ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ತಿಳಿದುಬಂದಿದೆ.
ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 4 ಕೋಟಿ 96 ಲಕ್ಷ ಮತದಾರಿದ್ದಾರೆ. ಅವರಲ್ಲಿ 2 ಕೋಟಿ 51 ಲಕ್ಷ ಪುರುಷ ಮತದಾರಿದ್ದರೆ, 2 ಕೋಟಿ 44 ಲಕ್ಷ ಮಹಿಳಾ ಮತದಾರರಿದ್ದಾರೆ. ಕನ್ನಡ, ಇಂಗ್ಲಿಷ್ನಲ್ಲಿ ಮತದಾರರ ಚೀಟಿ ಇರುತ್ತದೆ ಎಂದು ರಾವತ್ ತಿಳಿಸಿದರು.
ರಾಜ್ಯದಲ್ಲಿ ಒಟ್ಟು 4,96. 357 ಕೋಟಿ ಮತದಾರರಿದ್ದಾರೆ. ಒಂದೇ ಒಂದು ಹಂತದ ಮತದಾನ ಇಲ್ಲಿ ನಡೆಯಲಿದ್ದು, 56,000 ಮತಗಟ್ಟೆಗಳಿರಲಿವೆ. ಈ ಬಾರಿ ಇವಿಎಂ ಜತೆ ವಿವಿ ಪ್ಯಾಟ್ (ಮತ ಖಾತರಿ ಯಂತ್ರ) ಇರಲಿದೆ. ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ಸೌಲಭ್ಯವಿರಲಿದೆ.
ಪಕ್ಷಗಳ ಚುನಾವಣಾ ವೆಚ್ಚಕ್ಕೆ ಯಾವುದೇ ಮಿತಿಯಿರುವುದಿಲ್ಲ, ಆದರೆ ಅಭ್ಯರ್ಥಿಯೊಬ್ಬರ ಚುನಾವಣಾ ವೆಚ್ಚ ₹28 ಲಕ್ಷಕ್ಕೆ ಸೀಮಿತಗೊಳಿಸಲಾಗಿದೆ. ಈಗಿರುವ 224 ಸದಸ್ಯರ ಕರ್ನಾಟಕ ವಿಧಾನಸಭೆಯ ಕಾಲಾವಧಿ ಮೇ 28ರಂದು ಅಂತ್ಯಗೊಳ್ಳಲಿದೆ. ಮೇ ತಿಂಗಳು ಮುಗಿಯುವುದರೊಳಗೆ ಕರ್ನಾಟಕದಲ್ಲಿ ಚುನಾವಣಾ ಪ್ರಕ್ರಿಯೆಗಳು ಪೂರ್ತಿಗೊಳ್ಳಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiPoliticsರಾಜಕೀಯElection Commissionಕರ್ನಾಟಕ ವಿಧಾನಸಭಾ ಚುನಾವಣೆ 2018OP RawatKarnataka assembly elections 2018ಓಪಿ ರಾವತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


