ಪೌರ ಕಾರ್ಮಿಕರಿಂದ ಕಲಬುರಗಿಯಲ್ಲಿ ನೂತನ ಮೇಯರ್ ಕಚೇರಿ ಉದ್ಘಾಟನೆ
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೇಯರ್ ಕಚೇರಿಯನ್ನು ಪೌರ ಕಾರ್ಮಿಕರು ನಿನ್ನೆ ಉದ್ಘಾಟಿಸಿದರು.

ಕಲಬುರಗಿ : ರಾಜ್ಯ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಒಂದು ತಾಸು ಮುಂಚಿತವಾಗಿ ಜಾರಿಯಾದ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೇಯರ್ ಕಚೇರಿಯನ್ನು ಪೌರ ಕಾರ್ಮಿಕರು ನಿನ್ನೆ ಉದ್ಘಾಟಿಸಿದರು.
ನಗರದಲ್ಲಿನ ಒಳಚರಂಡಿ ಸ್ವಚ್ಛಗೊಳಿಸುವ ಪೌರ ಕಾರ್ಮಿಕರು ಸಮಾಜದ ಕೀಲಿಕೈ ಆಗಿದ್ದು, ಮಹಾನಗರ ಪಾಲಿಕೆಯ ಬೆನ್ನೆಲುಬು ಆಗಿದ್ದಾರೆ ಎಂದು ಮೇಯರ್ ಶರಣಕುಮಾರ್ ಮೋದಿ ಹೇಳಿದರು.
ಮಹಾನಗರ ಪಾಲಿಕೆಯ ಕಟ್ಟಡ ನಿರ್ಮಾಣ ಕಾಮಗಾರಿ ಶೇ.99 ರಷ್ಟು ಪೂರ್ಣಗೊಂಡಿದ್ದು, ತನ್ನ ಕಚೇರಿಯನ್ನು ಪೌರ ಕಾರ್ಮಿಕರ ಉದ್ಘಾಟಿಸಬೇಕೆಂದು ಮನವಿ ಮಾಡಿದ್ದಾಗಿ ಅವರು ತಿಳಿಸಿದರು.
ಅಪೂರ್ಣಗೊಂಡಿರುವ ನೂತನ ಕಟ್ಟಡವನ್ನು ಉದ್ಘಾಟಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದರು.
50 ವರ್ಷಗಳಷ್ಟು ಹಳೆಯದಾದ ಕಟ್ಟಡದ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನೂತನ ಕಚೇರಿಯನ್ನು ಉದ್ಘಾಟಿಸಿರುವುದಾಗಿ ಮೇಯರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


