ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಆಲಿಕಲ್ಲು ಮಳೆ, ಧರೆಗುರುಳಿದ ಮರಗಳು
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಶುಕ್ರವಾರ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ...

Published On :
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಶುಕ್ರವಾರ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಬಿಸಿಲಿನ ಝಳದಿಂದ ತತ್ತರಿಸಿ ಹೋಗಿದ್ದ ಜನರಿಗೆ ವರುಣ ದೇವ ತುಸು ತಂಪು ನೀಡಿದ್ದಾನೆ.
ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ರಾಮಮೂರ್ತಿ ನಗರ, ಜಾಲಹಳ್ಳಿ, ಮಲೇಶ್ವರಂ ಸೇರಿದಂತೆ ಬೆಂಗಳೂರಿನ ಹಲವೆಡೆ ಇಂದು ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.
ಮಲ್ಲೇಶ್ವರ ಹಾಗೂ ಯಶವಂತಪುರದಲ್ಲಿ ಭಾರಿ ಮಳೆಗೆ ಹಲವು ಮರಗಳು ಧರೆಗುರುಳಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ಜನ ಪರದಾಡುವಂತಾಗಿದೆ.
ನೆಲಮಂಗಲ, ದೊಡ್ಡಬಳ್ಳಾಪುರ, ತಾವರೆಕೆರೆಯಲ್ಲಿ ಗಾಳಿ, ಗುಡುಗು ಸಹಿ ಭಾರಿ ಮಳೆಯಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ, ಕೋಲಾರದಲ್ಲೂ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


