ರಾಜ್ಯ

ವಿಶ್ವವಿಖ್ಯಾತ ಕರಗ ಉತ್ಸವಕ್ಕೆ ಕೆಲವೇ ಕ್ಷಣಗಳಲ್ಲಿ ಚಾಲನೆ

ಬೆಂಗಳೂರು ನಗರದಲ್ಲಿ ನಡೆಯುವ ಐತಿಹಾಸಿಕ ಕರಗ ಉತ್ಸವಕ್ಕೆ ಇನ್ನು ಕೆಲವೇ ನಿಮಿಷಗಳು ಬಾಕಿ ಇದ್ದು, ಚಾಲನೆ ದೊರೆಯಲಿದೆ.

ವಿಶ್ವವಿಖ್ಯಾತ ಕರಗ ಉತ್ಸವಕ್ಕೆ ಕೆಲವೇ ಕ್ಷಣಗಳಲ್ಲಿ ಚಾಲನೆ
ಕರಗ
Published On :
ಬೆಂಗಳೂರು: ಬೆಂಗಳೂರು ನಗರದಲ್ಲಿ ನಡೆಯುವ ಐತಿಹಾಸಿಕ ಕರಗ ಉತ್ಸವಕ್ಕೆ ಇನ್ನು ಕೆಲವೇ ನಿಮಿಷಗಳು ಬಾಕಿ ಇದ್ದು, ಚಾಲನೆ ದೊರೆಯಲಿದೆ. 
ಧರ್ಮರಾಯಸ್ವಾಮಿ ದೇವಾಲಯದಿಂದ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ, ಅಕ್ಕಿ ಪೇಟೆ, ಅರಳೆಪೇಟೆ, ತಿಗಳರ ಪೇಟೆ, ಕಬ್ಬನ್ ಪೇಟೆ, ದೊಡ್ಡಪೇಟೆ, ಕೆ.ಆರ್ ಮಾರ್ಕೆಟ್ ಮಾರ್ಗವಾಗಿ ಕರಗ ಉತ್ಸವ ಸಂಚರಿಸಲಿದ್ದು, ಕುಲ ಪುರೋಹಿತರ ಮನೆಯಲ್ಲಿ ವಿಶೇಷ ಪೂಜೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮನು ಎಂಬುವವರು ಹೂವಿನ ಕರಗವನ್ನು ಹೊರಲಿದ್ದಾರೆ.  ಕರಗ ಉತ್ಸವಕ್ಕೆ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಅಂತಿಮ ಸಿದ್ಧತೆ ನಡೆದಿದ್ದು, ಕರಗ ಸಂಚರಿಸುವ ಮಾರ್ಗಗಳಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಏ.1 ರಂದು ಸೂರ್ಯೋದಯದ ವೇಳೆಗೆ ಕರಗ ಧರ್ಮರಾಯಸ್ವಾಮಿ ದೇವಾಲಯಕ್ಕೆ ವಾಪಸ್ಸಾಗಲಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.