ನೀತಿ ಸಂಹಿತೆ ಉಲ್ಲಂಘನೆ; ಸಚಿವ ಎ ಮಂಜುಗೆ ನೋಟಿಸ್ ಜಾರಿ ಮಾಡಿದ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜುಗೆ ಹಾಸನ ಜಿಲ್ಲಾ ಚುನಾವಣಾ ಅಧಿಕಾರಿ ರೋಹಿಣಿ ಸಿಂಧೂರಿ ನೋಟಿಸ್ ಜಾರಿ ಮಾಡಿದ್ದಾರೆ.

Published On :
ಹಾಸನ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜುಗೆ ಹಾಸನ ಜಿಲ್ಲಾ ಚುನಾವಣಾ ಅಧಿಕಾರಿ ರೋಹಿಣಿ ಸಿಂಧೂರಿ ನೋಟಿಸ್ ಜಾರಿ ಮಾಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಖಾಸಗಿ ವ್ಯಕ್ತಿಗಳು ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜುಗೆ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಲೋಕೋಪಯೋಗಿ ಇಲಾಖೆ ಕಟ್ಟಡ ಬಳಕೆಗೆ ಲಭ್ಯವಾಗಿದ್ದು ಹೇಗೆ ಎಂದು ಏಪ್ರಿಲ್ 2ರ ಬೆಳಗ್ಗೆ ಹನ್ನೊಂದರೊಳಗೆ ಪ್ರತಿಕ್ರಿಯೆ ನೀಡುವಂತೆ ಲೋಕೋಪಯೋಗಿ ಇಲಾಖೆಗೆ ಪ್ರತ್ಯೇಕ ನೋಟಿಸ್ ಜಾರಿಗೊಳಿಸಲಾಗಿದೆ.
ಮೂಲಗಳ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರ ಕಚೇರಿಯಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಷ್ಟೇ ಪ್ರಯತ್ನಿಸಿದರೂ ಕಚೇರಿ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸಚಿವರ ಕಚೇರಿ ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ದರು, ಕೆಲಸದ ವೇಳೆ ಮುಂಬಾಗಿಲಿಗೆ ಬೀಗ ಹಾಕಲಾಗಿತ್ತು, ಸ್ಥಳಕ್ಕೆ ಬಂದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಬರಿಗೈಲಿ ವಾಪಸ್ಸಾಗಿದ್ದರು, ಒಳಗಿರುವ ಸಿಬ್ಬಂದಿ ಪೇಪರ್ ಕಟಿಂಗ್ ಮಾಡುತ್ತಿದ್ದರು ಎಂದು ಕೆಲವರು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹಾಸನHassanA Manjuಎ ಮಂಜುKarnataka Assembly ElectionRohini Sindhuriರೋಹಿಣಿ ಸಿಂಧೂರಿಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


