ಕರ್ನಾಟಕ; ಯಶೋಮತಿ ಠಾಕೂರ್ ಕಾಂಗ್ರೆಸ್ ಸಹ ಉಸ್ತುವಾರಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಾಂಗ್ರೆಸ್ ಹೈ ಕಮಾಂಡ್ ಯಶೋಮತಿ ಠಾಕೂರ್ ಅವರನ್ನು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ...

Published On :
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಾಂಗ್ರೆಸ್ ಹೈ ಕಮಾಂಡ್ ಯಶೋಮತಿ ಠಾಕೂರ್ ಅವರನ್ನು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿವೆ. ಹಾಲಿ ರಾಜ್ಯ ಉಸ್ತುವಾರಿಯಾಗಿರುವ ಕೆ.ಸಿ.ವೇಣುಗೋಪಾಲ್ ಹಾಗೂ ವಲಯ ಉಸ್ತುವಾರಿಗಳಾಗಿರುವ 4 ಮಂದಿ ಎಐಸಿಸಿ ಕಾರ್ಯದರ್ಶಿಗಳ ಮೇಲೆ ಚುನಾವಣೆಯ ಹೆಚ್ಚಿನ ಹೊರೆ ಬಿದ್ದಿದೆ.
ಹೀಗಾಗಿ ಕೆಲಸದ ಒತ್ತಡ ಹೆಚ್ಚಾಗಲಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮೂಲದ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಅವರನ್ನು ಎಐಸಿಸಿ ಕಾರ್ಯದರ್ಶಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Karnatakaಕರ್ನಾಟಕವಿಧಾನಸಭಾ ಚುನಾವಣೆAssembly pollYashomati ThakurCongress secretaryಯಶೋಮತಿ ಠಾಕೂರ್ಕಾಂಗ್ರೆಸ್ ಉಸ್ತುವಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


