ಬೆಂಗಳೂರು: ಸಿನಿಮೀಯ ರೀತಿ ಕಾರ್ಯಾಚರಣೆ, ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ಹಣ ವಶ
ಸಿನಿಮಾ ಮಾದರಿಯಲ್ಲಿ ಕಾರನ್ನು ಚೇಸ್ ಮಾಡಿದ ಚುನಾವಣಾಧಿಕಾರಿಗಳು ಹಾಗೂ ತೆರಿಗೆ ಇಲಾಖಾ ಅಧಿಕಾರಿಗಳು ಕಾರಿನಲ್ಲಿದ್ದ 85 ಲಕ್ಷ ಹಣ ವಶಕ್ಕೆ ಪಡೆದುಕೊಂಡ ಘಟನೆ ನೆಲಮಂಗಲದ ಬಳಿ ನಡೆದಿದೆ.

Published On :
ಬೆಂಗಳೂರು: ಸಿನಿಮಾ ಮಾದರಿಯಲ್ಲಿ ಕಾರನ್ನು ಚೇಸ್ ಮಾಡಿದ ಚುನಾವಣಾಧಿಕಾರಿಗಳು ಹಾಗೂ ತೆರಿಗೆ ಇಲಾಖಾ ಅಧಿಕಾರಿಗಳು ಕಾರಿನಲ್ಲಿದ್ದ 85 ಲಕ್ಷ ಹಣ ವಶಕ್ಕೆ ಪಡೆದುಕೊಂಡ ಘಟನೆ ನೆಲಮಂಗಲದ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ ನೆಲಮಂಗಲದ ಜಾಸ್‍ಟೋಲ್ ಸಮೀಪದ ಚುನಾವಣಾ ಚೆಕ್‍ಪೊೀಸ್ಟ್ ಬಳಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣ ಯಾರಿಗೆ ಸೇರಿದ್ದೆನ್ನುವ ಸಂಬಂಧ ತನಿಖೆ ನಡೆಯುತ್ತಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮಹೀಂದ್ರ ಕಾರಿನಲ್ಲಿ 85 ಲಕ್ಷ ರೂ. ಸಾಗಣೆ ಮಾಡಲಾಗುತ್ತಿದೆ ಎನ್ನುವ ನಿಖರ ಮಾಹಿತಿ ಪಡೆದ ಅಧಿಕಾರಿಗಳು ಕಾರನ್ನು ಚೇಸ್ ಮಾಡುತ್ತಾರೆ ಹಾಗೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರನ್ನು ಅಡ್ಡಗಟ್ಟಿ ಹಣವನ್ನು ವಶಕ್ಕೆ ಪಡೆಯುತ್ತಾರೆ.
ಐಟಿ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ನಾವು ನೆಲಮಂಗಲದ ಬಳಿ ಕಾರನ್ನು ಅಡ್ಡಗಟ್ಟಿ ಪರಿಶೀಲಿಸಿದೆವು ಆಗ ಆರಿನ ಸೀಟಿನಡಿ ಹುದುಗಿಸಿಡಲಾಗಿದ್ದ 85 ಲಕ್ಷ ಹಣ ಪತ್ತೆಯಾಗಿದೆ. ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
NelamangalaನೆಲಮಂಗಲIT officialsಐಟಿ ಅಧಿಕಾರಿಗಳುKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆcar chasingಕಾರ್ ಚೇಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


