ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಮನೆ ಮೇಲೆ ಐಟಿ ದಾಳಿ
ಶಿರಸಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಆದಾಯ ತೆರಿಕೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ...

Published On :
ಕಾರವಾರ: ಶಿರಸಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಆದಾಯ ತೆರಿಕೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಟ್ಟಣದಲ್ಲಿರುವ ಅಯ್ಯಪ್ಪನಗರದಲ್ಲಿರುವ ಭೀಮಣ್ಣ ಅವರ ನಿವಾಸದ ಮೇಲೆ ಈ ದಾಳಿ ನಡೆದಿದೆ.
ಸುಮಾರು 5 ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಭೀಮಣ್ಣ ಅವರು ಮಾಡಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಕುಟುಂಬದ ಸಂಬಂಧಿಕರಾಗಿದ್ದಾರೆ. 2008ರಲ್ಲಿ ಶಿರಸಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
ಭೀಮಣ್ಣ ಅವರು ಶಿರಸಿಯಲ್ಲಿ ಕೆಲ ಬಾರ್ ಗಳನ್ನು ಹೊಂದಿದ್ದಾರೆ. ಇವರಿಗೆ 20 ಎಕರೆ ಅಡಕೆ ತೋಟವೂ ಇದೆ. ಐಟಿ ದಾಳಿ ವೇಳೆ ಭೀಮಣ್ಣ ನಾಯ್ಕ್ ಅವರು ಸಿದ್ದಾಪುರದಲ್ಲಿ ಪ್ರಚಾರಹ ಕಾರ್ಯದಲ್ಲಿ ನಿರತರಾಗಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಶಿರಸಿCongress candidateಕಾಂಗ್ರೆಸ್ ಅಭ್ಯರ್ಥಿಐಟಿ ದಾಳಿIT raidSirsiBheemanna Naikಭೀಮಣ್ಣ ನಾಯ್ಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


