ಕುಡಿಯುವ ನೀರಿಗೆ ರಾಜ್ಯದಲ್ಲಿ ಕೊರತೆ ಇರುವಾಗ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಪ್ರಸ್ತುತ ರಾಜ್ಯಜದಲ್ಲಿ ಕುಡಿಯುವ ನೀರಿಗೇ ಕೊರತೆ ಇರುವ ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Published On :
ದಾವಣಗೆರೆ: ಪ್ರಸ್ತುತ ರಾಜ್ಯಜದಲ್ಲಿ ಕುಡಿಯುವ ನೀರಿಗೇ ಕೊರತೆ ಇರುವ ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದಾವಣಗೆರೆಯಲ್ಲಿ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಆದರೆ ನಮ್ಮಲ್ಲೇ ನೀರಿಲ್ಲ. ಇನ್ನು ನಾವೆಲ್ಲಿಂದ ಅವರಿಗೆ ನೀರು ಕೊಡುವುದು ಎಂದು ಹೇಳಿದರು. ಅಂತೆಯೇ ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ನಮ್ಮ ವಕೀಲರ ಜತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ನೀರು ಬಿಟ್ಟರೆ ಹೋರಾಟದ ಎಚ್ಚರಿಕೆ ನೀಡಿದ ರೈತಪರ ಸಂಘಟನೆಗಳು
ಇನ್ನು ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು, 'ಈಗಾಗಲೇ ಜಲಾಶಯಗಳಲ್ಲಿ ನೀರು ಖಾಲಿಯಾಗಿದೆ. ಬರಗಾಲದಿಂದಾಗಿ ರೈತರು ಬಳಲುತ್ತಿದ್ದಾರೆ. ಇದರಿಂದಾಗಿ ರೈತರ ಆತ್ಮಹತ್ಯೆಗಳಾಗಿವೆ. ಮಾನ್ಯ ನ್ಯಾಯಾಧೀಶರು ಈಗಾಗಲೇ ಹತ್ತು ದಿನಗಳೊಳಗೆ ನೀರು ಬಿಡುವಂತೆ ನೀಡಿರುವ ತೀರ್ಪನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸುತ್ತೇವೆ. ಈ ಕುರಿತು ರಾಜ್ಯದ ಪರ ವಕೀಲರು ಸುಪ್ರೀಂಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಆಗ್ರಹಿಸಿದರು.
ನಮಗೆ ಕುಡಿಯಲು, ಬೆಳೆಗೆ ನೀರು ಸಾಕಾಗುತ್ತಿಲ್ಲ. ಡೆಡ್ ಸ್ಟೋರೇಜ್ ವಾಟರ್ ಅನ್ನು ಕುಡಿಯಲು ಮಾತ್ರ ಉಪಯೋಗಿಸಲಾಗುತ್ತದೆ. ಬೆಳೆಗಳಿಗೆ ನೀರು ಬಿಡಲು ಸಾಧ್ಯವಾಗುವುದಿಲ್ಲ. ಇದರಿಂದ ನಮ್ಮ ರೈತರು ಬೆಳೆದ ಬೆಳೆ ಒಣಗಿ ಹೋಗುತ್ತದೆ. ವಾಸ್ತವ ಪರಿಸ್ಥಿತಿ ವಿವರಿಸಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಬೇಕು ಎಂದು ರೈತ ಮುಖಂಡರೊಬ್ಬರು ಹೇಳಿದ್ದಾರೆ.
ಪ್ರಸ್ತುತ ಕೆಆರ್‌ಎಸ್‌ನಲ್ಲಿ ಸದ್ಯ 72.46 ಅಡಿ ನೀರಿದ್ದು, 4 ಟಿಎಂಸಿ ನೀರು ಬಿಟ್ಟರೆ ರಾಜ್ಯದಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗುವುದು ಖಚಿತ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtತಮಿಳುನಾಡುTamil NaduSiddaramaiahಸಿದ್ದರಾಮಯ್ಯಸುಪ್ರೀಂ ಕೋರ್ಟ್ದಾವಣಗೆರೆdavanagereಕಾವೇರಿ ವಿವಾದCauvery row
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


