ಎಚ್. ಡಿ ಕೋಟೆ ಬಳಿ ಕಂದಕಕ್ಕೆ ಬಿದ್ದು ಆನೆ ಸಾವು
ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲೂಕಿನ ಅಂತರಸಂತೆ ಗ್ರಾಮದ ಬಳಿ ದೊಡ್ಡದಾದ ಕಂದಕಕ್ಕೆ ಬಿದ್ದು 60 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿದೆ.

ಎಚ್. ಡಿ. ಕೋಟೆ : ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲೂಕಿನ ಅಂತರಸಂತೆ ಗ್ರಾಮದ ಬಳಿ ದೊಡ್ಡದಾದ ಕಂದಕಕ್ಕೆ ಬಿದ್ದು 60 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿದೆ.
ಸುದ್ದಿ ತಿಳಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕಾಗಿಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೃತದೇಹವನ್ನು ಎತ್ತಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಈ ಆನೆ ನಾಗರಹೊಳೆ ಅರಣ್ಯದಿಂದ ತಪ್ಪಿಸಿಕೊಂಡು ಬಂದಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆ ಬಳಿಕ ಗ್ರಾಮಸ್ಥರು ಹಾಗೂ ವನ್ಯಜೀವಿ ಸಂರಕ್ಷಣೆ ಕುರಿತ ಕಾರ್ಯದಲ್ಲಿ ತೊಡಗಿರುವ ಎನ್ ಜಿ ಒಗಳ ಸಮ್ಮುಖದಲ್ಲಿ ಆ ಗ್ರಾಮದಲ್ಲಿಯೇ ಆನೆ ಅಂತ್ಯಸಂಸ್ಕಾರ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


