ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಚುನಾವಣಾ ಪ್ರಚಾರ ಮಾಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್
ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ....

Published On :
ನವದೆಹಲಿ: ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಸದ್ಯ ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.ಈ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಪ್ರಚಾರ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ತಮ್ಮ ಸಹೋದರ ಸೋಮಶೇಖರ ರೆಡ್ಡಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಅವರ ಪರವಾಗಿ ಪ್ರಚಾರ ನಡೆಸಲು ಅವಕಾಶ ನೀಡಬೇಕೆಂದು ಸುಪ್ರೀಂಕೋರ್ಟ್ ಗೆ ಜನಾರ್ದನ ರೆಡ್ಡಿ ಮನವಿ ಮಾಡಿದ್ದರು.
ಷರತ್ತು ಬದ್ದ ಜಾಮೀನು ನೀಡಿದ್ದು, ಜನಾರ್ದನ ರೆಡ್ಡಿ ಮತ ಚಲಾಯಿಸಬೇಕಾಗಿದೆ, ಅದಕ್ಕಾಗಿ ಷರತ್ತುಗಳನ್ನು ಸಡಿಲಗೊಳಿಸಬೇಕೆಂದು ರೆಡ್ಡಿ ಪರ ವಕೀಲ ವಾದ ಮಾಡಿದರು. ಆದರೆ ಕೋರ್ಟ್ ರೆಡ್ಡಿ ಪರ ವಕೀಲರ ವಾದವನ್ನು ತಳ್ಳಿ ಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್ಜನಾರ್ದನ ರೆಡ್ಡಿಬಳ್ಳಾರಿಚುನಾವಣಾ ಪ್ರಚಾರBallariGali Janardhana ReddyElecttion Campaign
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


