ಚಿತ್ರದುರ್ಗ: ಪ್ರಚಾರ ನಡೆಸುವಾಗಲೇ ಕುಸಿದು ಬಿದ್ದ ಸಚಿವ ಆಂಜನೇಯ, ಆಸ್ಪತ್ರೆಗೆ ದಾಖಲು
ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವಾಗಲೇ ಕುಸಿದು ಬಿದ್ದ ಸಚಿವ ಎಚ್. ಆಂಜನೇಯ ಅವರನ್ನು ಆಸ್ಪತ್ರೆಗೆ ದಾಖಲಿಸಿಅಲಾಗಿದೆ.

Published On :
ಚಿತ್ರದುರ್ಗ:ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವಾಗಲೇ ಕುಸಿದು ಬಿದ್ದ ಸಚಿವ ಎಚ್. ಆಂಜನೇಯ ಅವರನ್ನು ಆಸ್ಪತ್ರೆಗೆ ದಾಖಲಿಸಿಅಲಾಗಿದೆ.
ಶನಿವಾರದಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಇಸಾಮುದ್ರ ಗ್ರಾಮದಲ್ಲಿ ಪ್ರಚಾರ ಕೈಗೊಂಡಿದ್ದ ವೇಳೆ ಸಚಿವರು ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ.
ಚಿತ್ರದುರ್ಗ ಸೀಮೆಯ ಬಿರುಬಿಸಿಲಿನಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಕೈಗೊಂಡಿದ್ದ ಸಚಿವ ಆಂಜನೇಯ ಅವರಿಗೆ ತಲೆಸುತ್ತು ಹಾಗೂ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸ್ಥಳದಲ್ಲಿದ್ದ ವೈದ್ಯ ಡಾ.ಸತೀಶ್ ಚಿಕಿತ್ಸೆ ಮಾಡಿದ್ದಾರೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆ ಎಸ್.ಎಸ್. ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಾಗಿದೆ.
ಸಧ್ಯ ವೈದ್ಯರ ಅಬ್ಸರ್ವೇಷನ್ನಲ್ಲಿರುವ ಸಚಿವರು ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ. ಸಚಿವರ ಆರೋಗ್ಯ ಹದಗೆಟ್ಟ ಕಾರಣ ಅವರ ಕುಟುಂಬಸ್ಥರು, ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆತಂಕ ಉಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
chitradurgaಚಿತ್ರದುರ್ಗH. Anjaneyaಹೆಚ್. ಆಂಜನೇಯSS Narayana Heart Centreಕರ್ನಾಟಕ ವಿಧಾನಭೆ ಚುನಾವಣೆಎಸ್ಎಸ್ ನಾರಾಯಣ ಹೃದಯಾಲಯ ಆಸ್ಪತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


