ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು ಅಕೌಂಟೆಂಟ್ ಆತ್ಮಹತ್ಯೆ
ಪತ್ನಿ ಕೆಲಸ ಮಾಡುವ ಸ್ಥಳದಲ್ಲಿ ಬೇರೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರಿಂದ ಬೇಸತ್ತು ಖಾಸಗಿ ಕಾರ್ಖಾನೆಯ ಅಕೌಂಟೆಂಟ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ರಸ್ತೆಯ ಚೋಳರುಪಾಳ್ಯದಲ್ಲಿ ನಡೆದಿದೆ.

ಬೆಂಗಳೂರು : ಪತ್ನಿ ಕೆಲಸ ಮಾಡುವ ಸ್ಥಳದಲ್ಲಿ ಬೇರೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರಿಂದ ಬೇಸತ್ತು ಖಾಸಗಿ ಕಾರ್ಖಾನೆಯ ಅಕೌಂಟೆಂಟ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ರಸ್ತೆಯ ಚೋಳರು ಪಾಳ್ಯದಲ್ಲಿ ನಡೆದಿದೆ.
ಮೃತನನ್ನು 34 ವರ್ಷದ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಗಂಗಲಕ್ಷ್ಮಿ ಎಂಬವರೊಂದಿಗೆ 2007ರಲ್ಲಿ ವಿವಾಹವಾಗಿದ್ದು, ಅವರಿಗೆ 9 ವರ್ಷದ ಮಗಳಿದ್ದಾಳೆ. ಕುಟುಂಬ ಕಲಹ ಹಿನ್ನೆಲೆಯಲ್ಲಿ ಕೆಲ ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
ವಿಜಯನಗರದಲ್ಲಿನ ಎಲ್ ಪಿಜಿ ಅನಿಲ ವಿತರಣೆ ಕಂಪನಿಯೊಂದರಲ್ಲಿ ಲಕ್ಷ್ಮಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು .ಪತ್ನಿ ಬೇರೊಬ್ಬರೊಂದಿಗೆ ಸಂಬಂಧ ಹೊಂದಿದ್ದ ವಿಷಯ ತಿಳಿದು ಕುಮಾರ್ ಒಂದು ವರ್ಷದಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಾನಸಿಕ ಖಿನ್ನತೆಗೊಳಗಾಗಿದ್ದ ಆತ ಪೊಲೀಸರಿಗೆ ದೂರು ಸಲ್ಲಿಸಿ, ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ.
ಖಿನ್ನತೆಯಿಂದ ಹೊರಬರಲು ಆತ ಪೋಷಕರು ಕೂಡಾ ಸಲಹೆ ನೀಡಿದ್ದರು. ಆದರೆ. ಬುಧವಾರ ರಾತ್ರಿ ಆತ್ಮಹತ್ಯೆ ನೋಟ್ ನ್ನು ಡಿಸಿಪಿ ರವಿ ಡಿ ಚೆನ್ನಣ್ಣನವರ್ ಅವರಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೋಹನ್ ಪದೇ ಪದೇ ಎಚ್ಚರಿಕೆ ನೀಡಿದ್ದರೂ ಅಮಿತ್ ಸೆತ್ ಆಕೆಯನ್ನು ಬಿಟ್ಟಿರಲಿಲ್ಲ. ಲಕ್ಷ್ಮಿ ಕೂಡಾ ಕಿರುಕುಳ ನೀಡುತ್ತಿದ್ದಳು ಎಂದು 24 ಪುಟದ ನೋಟ್ ನಲ್ಲಿ ಮೋಹನ್ ಕುಮಾರ್ ತಿಳಿಸಿದ್ದಾನೆ. ಈ ಘಟನೆ ಆದ ನಂತರ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರ ಪತ್ತೆಗಾಗಿ ವಿಶೇಷ ತಂಡವೊಂದನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


