ಇಂದು ನೀಟ್ ಪರೀಕ್ಷೆ, ರಾಜ್ಯದ 96 ಸಾವಿರ ಅಭ್ಯರ್ಥಿಗಳು ಭಾಗಿ
ರಾಷ್ಟ್ರೀಯ ಅರ್ಹತೆ ಕಮ್ ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಯು ಇಂದು ದೇಶಾದ್ಯಂತ ನಡೆಯಲಿದೆ. ಒಟ್ಟು 13,26,725 ಅಭ್ಯರ್ಥಿಗಳು ....

Published On :
ಬೆಂಗಳೂರು: ರಾಷ್ಟ್ರೀಯ ಅರ್ಹತೆ ಕಮ್ ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಯು ಇಂದು ದೇಶಾದ್ಯಂತ ನಡೆಯಲಿದೆ. ಒಟ್ಟು 13,26,725 ಅಭ್ಯರ್ಥಿಗಳು ವೈದ್ಯಕೀಯ, ದಂತ ಮತ್ತು ಆಯುಶ್ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆಗೆ ಹಾಜರಾಗಲಿದ್ದಾರೆ.
ರಾಜ್ಯದ 96,377 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರು, ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ, ದಾವಣಗೆರೆ, ಮಂಗಳೂರು, ಉಡುಪಿ, ಮೈಸೂರು, ಧಾರವಾಡ ಸೇರಿ ಪ್ರಮುಖ ನಗರಗಳಲ್ಲಿ ಪರೀಕ್ಷೆಗಳು ನಡೆಯಲಿದೆ.
ಈ ಬಾರಿ ನೀಟ್ ಪರೀಕ್ಷೆಗಳು 11 ಬಾಷೆಗಳಲ್ಲಿ ಪ್ರಶ್ನೆಪತ್ರಿಕೆಗಳನ್ನು ಹೊಂದಿರಲಿದೆ. ಆದರೆ ಎಲ್ಲಾ ಭಾಷೆಗಳ ಪ್ರಶ್ನೆಪತ್ರಿಕೆಗಳೂ ಏಕ ಪ್ರಕಾರವಾಗಿರುತ್ತದೆ. ಕಳೆದ ಸಾಲಿನ ನೀಟ್ ಪರೀಕ್ಷೆಗಳಲ್ಲಿ ಉಂಟಾದ ಗೊಂದಲಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಈ ಬಾರಿ ಎಲ್ಲಾ ಭಾಷಾ ಪ್ರಶ್ನೆಪತ್ರಿಕೆಗಳೂ ಒಂದೇ ರೀತಿಯ ಪ್ರಶ್ನೆಗಳನ್ನು ಹೊಂದಿರಲಿದೆ ಎಂದಿದೆ.
ನೀಟ್ ಪರೀಶ್ಖೆಗಳು ಬೆಳಿಗ್ಗೆ 10ಕ್ಕೆ ಪ್ರಾರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕHuman Resource DevelopmentNEETನೀಟ್AYUSH courseಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಆಯುಶ್ ಕೋರ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


