ರಾಯಚೂರು: ಕಾಂಗ್ರೆಸ್ ಪರ ಪ್ರಚಾರ, ಕೃಷಿ ವಿವಿ ಪ್ರಾಧ್ಯಪಕಿ ಅಮಾನತು
ಕಾಂಗ್ರೆಸ್ ಪರವಾಗಿ ಸಾಮಾಜಿಕ ತಾಣ ಫೇಸ್ಬುಕ್ ಹಾಗೂ ವಾಟ್ಸ್ ಅಪ್ ಗಳಲ್ಲಿ ಪ್ರಚಾರ ಮಾಡುತ್ತಿದ್ದ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಪಕಿಯನ್ನು ಅಮಾನತುಗೊಳಿಸಲಾಗಿದೆ.

Published On :
ರಾಯಚೂರು: ಕಾಂಗ್ರೆಸ್ ಪರವಾಗಿ ಸಾಮಾಜಿಕ ತಾಣ ಫೇಸ್ಬುಕ್ ಹಾಗೂ ವಾಟ್ಸ್ ಅಪ್ ಗಳಲ್ಲಿ ಪ್ರಚಾರ ಮಾಡುತ್ತಿದ್ದ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಪಕಿಯನ್ನು ಅಮಾನತುಗೊಳಿಸಲಾಗಿದೆ.
ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಜಾಗೃತಿ ದೇಶಮಾನ್ಯ ಅಮಾನತುಗೊಂಡಿರುವ ಪ್ರಾದ್ಯಾಪಕಿ. ರಾಜಕೀಯ ಪಕ್ಷವೊಂದರ ಪರ ಪ್ರಚಾರ ನಡೆಸಿದ್ದಕ್ಕಾಗಿ ತಕ್ಶ್ಃಅಣ ಜಾರಿಗೆ ಬರುವಂತೆ ಮೂರು ತಿಂಗಳು ಅಮಾನತುಗೊಳಿಸಿ ವಿಶ್ವವಿದ್ಯಾಲಯದ ಕುಲಸಚಿವ ಜಂಬುನಾಥ ಗುತ್ತಿ ಆದೇಶಿಸಿದ್ದಾರೆ.
ಪ್ರಾದ್ಯಾಪಕಿ, ಪ್ರಧಾನಿ ಮೋದಿ ಹಾಗು ಶ್ರೀರಾಮುಲು ವಿರುದ್ಧ ಸಾಮಾಜಿಕ ತಾಣಗಳಲ್ಲಿ ಪ್ರಚಾರ ನಡೆಸಿದ್ದು ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕೋರಿದ್ದರು. ದೇಶಮಾನ್ಯ ಅವರು ಪರೋಕ್ಷವಾಗಿ ರಾಜಕೀಯದಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಿ ಎಂದು ಚುನಾವಣಾಧಿಕಾರಿಗಳು ಇತ್ತೀಚೆಗೆ ವಿಶ್ವವಿದ್ಯಾನಿಲಯಕ್ಕೆ ಶಿಪಾರಸು ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


