ರಾಜ್ಯ

ನನ್ನ ಸಹೋದರನನ್ನು ಯಾರು, ಏಕೆ ಕೊಂದರು?: ಅಮಿತ್ ಶಾಗೆ ವಿನಾಯಕ್ ಬಾಳಿಗ ಸಹೋದರಿ ಬಹಿರಂಗ ಪತ್ರ

ನನ್ನ ಸಹೋದರನನ್ನು ಯಾರು ಮತ್ತು ಏಕೆ ಕೊಂದರು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಬಿಜೆಪಿ ಕಾರ್ಯಕರ್ತ ವಿನಾಯಕ್ ಬಾಳಿಗ ಸೋದರಿ ಸೋಮವಾರ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ...

ನನ್ನ ಸಹೋದರನನ್ನು ಯಾರು, ಏಕೆ ಕೊಂದರು?: ಅಮಿತ್ ಶಾಗೆ ವಿನಾಯಕ್ ಬಾಳಿಗ ಸಹೋದರಿ ಬಹಿರಂಗ ಪತ್ರ
ನನ್ನ ಸಹೋದರನನ್ನು ಯಾರು, ಏಕೆ ಕೊಂದರು?: ಅಮಿತ್ ಶಾಗೆ ಬಹಿರಂಗ ಪತ್ರ ಬರೆದ ವಿನಾಯಕ್ ಬಾಳಿಗ ಸಹೋದರಿ
Published On :
ಮಂಗಳೂರು; ನನ್ನ ಸಹೋದರನನ್ನು ಯಾರು ಮತ್ತು ಏಕೆ ಕೊಂದರು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಬಿಜೆಪಿ ಕಾರ್ಯಕರ್ತ ವಿನಾಯಕ್ ಬಾಳಿಗ ಸೋದರಿ ಸೋಮವಾರ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. 
ಪತ್ರಿಕಾಗೋಷ್ಠಿ ನಡೆಸಿದ ವಿನಾಯಕ್ ಬಾಳಿಗ ಅವರ ಕುಟುಂಬಸ್ಥರು ತಮ್ಮ ಅಳಲನ್ನು ತೋಡಿಕೊಂಡರು. ಅಲ್ಲದೆ, ವಿನಾಯಕ್ ಬಾಳಿಗ ಅವರ ಸಹೋದರಿ ಅನುರಾಧ ಬಾಳಿಗ ಅವರು ಅಮಿತ್ ಶಾ ಅವರಿಗೆ ಬಹಿರಂಗ ಪ್ರಶ್ನೆಯನ್ನು ಕೇಳಿದ್ದಾರೆ. 
ನನ್ನ ಸಹೋದರನ್ನು ಯಾರು ಮತ್ತು ಏಕೆ ಕೊಂದರು ಎಂದು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ, ಹತ್ಯೆ ಪ್ರಕರಣವನ್ನು ವಿಶೇಷ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಗೃಹ ಕಾರ್ಯದರ್ಶಿಗಳಿಗೆ ಆಗ್ರಹಿಸಿದ್ದಾರೆ. 
ಹತ್ಯೆ ಪ್ರಕರಣದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಿ.ವೇದವ್ಯಾಸ ಕಾಮತ್ ಮತ್ತು ಅವರ ನಿಕಟವರ್ತಿ ನರೇಶ್ ಶೆಣೈ ಭಾಗಿಯಾಗಿರುವ ಸಂಶಯವನ್ನು ಇದೇ ವೇಳೆ ಬಾಳಿಗ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. 
ಪ್ರಕರಣದಲ್ಲಿ ನರೇಶ್ ಶೆಣೈ ಪ್ರಮುಖ ಆರೋಪಿಯಾಗಿದ್ದು, ಶೆಣೈವರೆಗೆ ಮಾತ್ರ ತನಿಖೆ ನಡೆದಿದೆ. ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ತನಿಖೆ ನಡೆಸಬೇಕಿದೆ. ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಕಾರ್ಯಕರ್ತ ಕೊಲೆ ವಿಚಾರವನ್ನು ಪ್ರಸ್ತಾಪ ಮಾಡುತ್ತಿರುವ ಬಿಜೆಪಿ, ವಿನಾಯಕ ಬಾಳಿಗ ಕೊಲೆ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ವಿನಾಯಕ ಬಾಳಿಗ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದರೂ ಅವರ ಹತ್ಯೆ ವಿಚಾರದಲ್ಲಿ ಪಕ್ಷ ಪ್ರತಿಭಟನೆ ನಡೆಸುತ್ತಿಲ್ಲ. ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಯಾವೊಬ್ಬ ನಾಯಕರೂ ನಮ್ಮ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳದಿರುವುದಕ್ಕೆ ಕಾರಣವೇನು ಎಂದು ವಿನಯ್ ಬಾಳಿಗ ಅವರ ತಂದೆ ರಾಮಚಂದ್ರ ಬಾಳಿಗ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.