ರಾಜ್ಯ

ಬೆಂಗಳೂರಿನಲ್ಲಿ 10 ಸಾವಿರಕ್ಕೂ ಅಧಿಕ ವೋಟರ್ ಐಡಿ ಪತ್ತೆ, ಚುನಾವಣಾ ಆಯೋಗದಿಂದ ತನಿಖೆ

ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಇನ್ನು ಮೂರು ದಿನ ಇರುವಂತೆಯೇ ಇತ್ತ ಬೆಂಗಳೂರಿನ ಒಂದು ಅಪಾರ್ಟ್ ಮೆಂಟ್ ನಲ್ಲಿ...

ಬೆಂಗಳೂರಿನಲ್ಲಿ 10 ಸಾವಿರಕ್ಕೂ ಅಧಿಕ ವೋಟರ್ ಐಡಿ ಪತ್ತೆ, ಚುನಾವಣಾ ಆಯೋಗದಿಂದ ತನಿಖೆ
ಬೆಂಗಳೂರಿನಲ್ಲಿ ಪತ್ತೆಯಾದ ಮತದಾರರ ಗುರುತಿನ ಚೀಟಿಗಳು
Published On :
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಬೆಂಗಳೂರಿನ ಒಂದು ಅಪಾರ್ಟ್ ಮೆಂಟ್ ನಲ್ಲಿ 10 ಸಾವಿರಕ್ಕೂ ಅಧಿಕ ವೋಟರ್ ಐಡಿಗಳು ಪತ್ತೆಯಾಗಿವೆ.
ನಗರದ ಪ್ರತಿಷ್ಠಿತ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತದಾನ ಮುಂದೂಡಿಕೆಯಾಗುವ ಸಾಧ್ಯತೆ ಗೋಚರವಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ 10 ಸಾವಿರಕ್ಕೂ ಅಧಿಕ ಮತದಾರರ ಗುರುತಿನ ಚೀಟಿ ಅಕ್ರಮವಾಗಿ ಪತ್ತೆಯಾಗಿದೆ.
ರಾಜರಾಜೇಶ್ವರಿ ನಗರದ ಜಾಲಹಳ್ಳಿಯ ಅಪಾರ್ಟ್​ವೆುಂಟ್​ವೊಂದರಲ್ಲಿ ಐದು ಲ್ಯಾಪ್ ಟಾಪ್, ಒಂದು ಪ್ರಿಂಟರ್, ಎರಡು ಟ್ರಂಕ್ ತುಂಬಾ ಮತದಾರಗುರುತಿನ ಚೀಟಿ ಸಿಕ್ಕಿದೆ. ಈ ವಿಚಾರ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಮತದಾನ ಮುಂದೂಡುವಂತೆ ಬಿಜೆಪಿ ಮತ್ತು ಜೆಡಿಎಸ್ ಪಟ್ಟು ಹಿಡಿದಿವೆ. ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಈ ಸಂಬಂಧ ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ. 
ಇನ್ನು ಮಂಜುಳಾ ನಂಜಾಮರಿ ಎಂಬುವರಿಗೆ ಸೇರಿದ ಫ್ಲ್ಯಾಟ್ ಅನ್ನು ರಾಕೇಶ್ ಎಂಬುವರು ಬಾಡಿಗೆಗೆ ಪಡೆದಿದ್ದಾರೆ ಎಂದು ತಿಳಿದುಬಂದಿದ್ದು, ಇಲ್ಲಿ ಲ್ಯಾಪ್​ಟಾಪ್ ಹಾಗೂ ಪ್ರಿಂಟರ್ ಇಟ್ಟು ವೋಟರ್ ಐಡಿಗಳನ್ನು ಸೃಷ್ಟಿಸಲಾಗಿದೆ. ಕಾರ್ಡ್ ಗಳ ಜತೆಗೆ ಮತದಾರರ ಹೆಸರು ಸೇರಿಸುವ ಫಾರಂ 6ರ ಕೌಂಟರ್ ಫೈಲ್​ಗಳು ಒಂದು ಲಕ್ಷ ಇತ್ತು ಎಂದು ತಿಳಿದುಬಂದಿದೆ.
ಈ ವಿಷಯ ತಿಳಿಯುತ್ತಿದ್ದಂತೆಯೇ ಅಪಾರ್ಟ್‍ಮೆಂಟ್ ಬಳಿ ಜಮಾಯಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಹಣದ ಆಮಿಷವೊಡ್ಡಿ ಮತದಾರರಿಂದ ವೋಟರ್ ಐಡಿಗಳನ್ನು ಸಂಗ್ರಹ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೆ ಸ್ಥಳದಲ್ಲಿ ಪ್ರತಿಭಟನೆ ಕೂಡ ನಡೆಸಿದರು. ಬಳಿಕ ಘಟನಾ ಸ್ಥಳಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.