ಬಾಗಲಕೋಟೆ: ಭೀಕರ ಅಪಘಾತದಲ್ಲಿ ಡಿವೈಎಸ್ ಪಿ ಬಾಳೇಗೌಡ ಸೇರಿ ಮೂವರು ಪೊಲೀಸರ ದುರ್ಮರಣ
: ಲಾರಿ ಮತ್ತು ಪೊಲೀಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸರು ಮೃತಪಟ್ಟಿದ್ದಾರೆ....

Published On :
ಬಾಗಲಕೋಟೆ: ಲಾರಿ ಮತ್ತು ಪೊಲೀಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸರು ಮೃತಪಟ್ಟಿದ್ದಾರೆ.
ಚುನಾವಣಾ ಕರ್ತವ್ಯಕ್ಕೆ ಬೆಂಗಳೂರಿನಿಂದ ಬಾಗಲಕೋಟೆಗೆ ತೆರಳುತ್ತಿದ್ದ ವೇಳೆ ಬಾಗಲಕೋಟೆಯ ಸಂಗಮ ಕ್ರಾಸ್ ಬಳಿ ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬೆಂಗಳೂರಿನ ಸಿಐಡಿ ಡಿವೈಎಸ್ಪಿ ಬಾಳೇಗೌಡ, ಸಿಪಿಐ ಶಿವಸ್ವಾಮಿ, ಪೊಲೀಸ್ ವಾಹನ ಚಾಲಕ ವೇಣುಗೋಪಾಲ್ ಸ್ಥಳದಲ್ಲೇ ಮೃತಪಟ್ಟಿದ್ಧಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಡಿವೈಎಸ್ಪಿ ಗಿರೀಶ್ ಸೇರಿದಂತೆ ಪೊಲೀಸರು ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


