ರಾಜ್ಯ

ಸಚಿವ ರಮನಾಥ್ ರೈ ಆಪ್ತನ ಮೇಲೆ ಹಲ್ಲೆ: ಇತರ ನಾಲ್ವರಿಗೆ ಗಾಯ, ಎರಡು ಕಾರು ಜಖಂ

ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಳೆದ ...

ಸಚಿವ ರಮನಾಥ್ ರೈ ಆಪ್ತನ ಮೇಲೆ ಹಲ್ಲೆ: ಇತರ ನಾಲ್ವರಿಗೆ ಗಾಯ, ಎರಡು ಕಾರು ಜಖಂ
ಸಚಿವ ರಮಾನಾಥ ರೈ
Published On :

ಮಂಗಳೂರು: ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಳೆದ ಮಧ್ಯರಾತ್ರಿ ದಾಳಿ ನಡೆಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯರಾಗಿರುವ  ಕಾಚಿಗುಡ್ಡ ಸಂಜೀವ ಪೂಜಾರಿ ಬಂಟ್ವಾಳ ತಾಲೂಕಿನ ಸಜೀಪ ಮೂಡದಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದ ವೇಳೆ ಮನೆ ಬಳಿ ಅಡ್ಡಗಟ್ಟಿದ್ದ ದುಷ್ಕರ್ಮಿಗಳು ‌ಕಾರಿಗೆ ಕಲ್ಲು ಹೊಡೆದು ಹಾನಿ‌ ಮಾಡಿದ್ದಾರೆ. ಇದರಿಂದ ಭಯಗೊಂಡು ಮನೆಗೆ ಹೋದ ಸಂಜೀವ ಪೂಜಾರಿ ಅವರನ್ನು ಹಿಂಬಾಲಿಸಿದ ಸುಮಾರು 20 ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿ ಸಾಮಾಗ್ರಿಗಳು ಮತ್ತು ಬಿಎಂಡಬ್ಲ್ಯೂ ಕಾರನ್ನು ಧ್ವಂಸಗೊಳಿಸಿದ್ದಾರೆ.

ಘಟನೆಯಲ್ಲಿ ಸಂಜೀವ ಪೂಜಾರಿ ಅವರ ಪತ್ನಿ ವಸಂತಿ ಪೂಜಾರಿ ಸೇರಿದಂತೆ ತಡೆಯಲು ಬಂದ ಇತರ ಮೂವರ ಮೇಲೆಯೂ ಹಲ್ಲೆ ನಡೆಸಲಾಗಿದೆ. ಎರಡು ಕಾರುಗಳಿಗೆ ಹಾನಿಯುಂಟಾಗಿದೆ. ಬಂಟ್ವಾಳ ತಾಲೂಕಿನ ತುಂಬೆಯ ಖಾಸಗಿ ಆಸ್ಪತ್ರೆಗೆ ಗಾಯಗೊಂಡವರನ್ನು ದಾಖಲಿಸಲಾಗಿದೆ. ಸಂಜೀವ್ ಪೂಜಾರಿ ಬಂಟ್ವಾಳದಲ್ಲಿ ಬಾರ್ ಹೊಂದಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Story image



ಹಾನಿಗೀಡಾಗಿರುವ ಕಾರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.