ರಾಜ್ಯ

ಮತದಾನದ ಹಿನ್ನೆಲೆಯಲ್ಲಿ ಮುಚ್ಚಿದ ಇಂದಿರಾ ಕ್ಯಾಂಟೀನ್: ಬಡವರಿಗೆ ಊಟಕ್ಕಾಗಿ ಸಂಕಷ್ಟ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ ಮತ್ತು ಕೇಂದ್ರೀಕೃತ ಅಡುಗೆ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ...

ಮತದಾನದ ಹಿನ್ನೆಲೆಯಲ್ಲಿ ಮುಚ್ಚಿದ ಇಂದಿರಾ ಕ್ಯಾಂಟೀನ್: ಬಡವರಿಗೆ ಊಟಕ್ಕಾಗಿ ಸಂಕಷ್ಟ
ಇಂದಿರಾ ಕ್ಯಾಂಟೀನ್
Published On :
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ ಮತ್ತು ಕೇಂದ್ರೀಕೃತ ಅಡುಗೆ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಘೋಷಿಸಿರುವುದರಿಂದ ಇಂದಿರಾ ಕ್ಯಾಂಟೀನ್ ಮುಚ್ಚಿರುವ ಹಿನ್ನೆಲೆಯಲ್ಲಿ ಬಡ ಜನರು ಆಹಾರಕ್ಕಾಗಿ ಸಂಕಷ್ಟ ಪಡುವಂತಾಗಿದೆ.
ರಾಜ್ಯದ 222 ವಿಧಾನ ಸಭೆ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. 
ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿ, ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟವನ್ನು ಅಗ್ಗದ ದರದಲ್ಲಿ ನೀಡಲಾಗುತ್ತಿದೆ. ಇದರಿಂದ ಆಟೋ ಚಾಲಕರು, ಕಾರ್ಮಿಕ ವರ್ಗ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರ ಊಟಕ್ಕೆ ಅನುಕೂಲ ವಾಗುತ್ತಿತ್ತು. ಬೆಂಗಳೂರು ನಗರದಲ್ಲಿ ಸುಮಾರು 40 ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.