ವಿಧಾನಸಭೆ ಚುನಾವಣೆ: ಮತಗಟ್ಟೆಯಲ್ಲೇ ಹೃದಯಾಘಾದಿಂದ ಇಬ್ಬರು ಸಾವು
ವಿಧಾನಸಭೆ ಚುನಾವಣೆಯಲ್ಲಿ ಶನಿವಾರ ತಮ್ಮ ಹಕ್ಕು ಚಲಾಯಿಸಲು ಹೋಗಿದ್ದ ಇಬ್ಬರು ಮತದಾರರು ಮತಗಟ್ಟೆಯಲ್ಲೇ ...

Published On :
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಶನಿವಾರ ತಮ್ಮ ಹಕ್ಕು ಚಲಾಯಿಸಲು ಹೋಗಿದ್ದ ಇಬ್ಬರು ಮತದಾರರು ಮತಗಟ್ಟೆಯಲ್ಲೇ ಹೃದಯಾಘಾತದಿಂದ ನಿಧನರಾಗಿರುವ ದಾರುಣ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 70 ವರ್ಷದ ಅಣ್ಣಿ ಆಚಾರ್ಯ ಎಂಬುವವರು ಮತ ಹಾಕಿ ವಾಪಸು ತೆರಳುವ ವೇಳೆ ಮತಗಟ್ಟೆಯಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ದಾರಿ ಮಧ್ಯಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಇನ್ನು ಪಾಂಡವಪುರ ವಿಧಾನಸಭಾ ಕ್ಷೇತ್ರದ ವಡ್ಡರಹಳ್ಳಿ ಮತಗಟ್ಟಿಯಲ್ಲಿ 55 ವರ್ಷದ ತಮ್ಮೇಗೌಡ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


