ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ
ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶನಿವಾರ ಬೆಳಗ್ಗೆ ...

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶನಿವಾರ ಬೆಳಗ್ಗೆ 7 ಗಂಟೆಗೆ ಎಲ್ಲಾ ಮತಗಟ್ಟೆಗಳಲ್ಲಿ ಆರಂಭವಾಗಿದೆ.
ಇಂದು ಬೆಳಗ್ಗೆಯಿಂದಲೇ ಮತಗಟ್ಟೆಗಳಿಗೆ ಜನರು ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ತಮ್ಮ ಕುಟುಂಬದವರ ಜತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳದ ಮತಗಟ್ಟೆಯೊಂದರಲ್ಲಿ ಬೆಳಗ್ಗೆ 6.40ಕ್ಕೆ ಆಗಮಿಸಿ ಸಾಲಿನಲ್ಲಿ ನಿಂತ ಮತದಾರನಿಗೆ 7 ಗಂಟೆಗೆ ಮತ ಚಲಾಯಿಸಲು ಬಿಡದೆ ಕಾರ್ಯಕರ್ತರು ಶಾಸಕರು ಬರಬೇಕೆಂದು ತಡೆದ ಕಾರಣ ಅಲ್ಲಿ ವಾಗ್ವಾದ ಉಂಟಾಯಿತು. ನಕಲಿ ಚುನಾವಣಾ ಗುರುತು ಪತ್ರ ಸಿಕ್ಕಿದ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮತದಾನ ಮುಂದೂಡಿದ್ದು ಹಲವರಿಗೆ ಗೊತ್ತಾಗದೆ ಹಲವರು ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸದೆ ಮತ್ತೆ ವಾಪಸ್ಸಾಗುತ್ತಿದ್ದ ದೃಶ್ಯ ಕಂಡುಬಂತು. ಇಲ್ಲಿನ ಮತದಾರರಿಗೆ ಗೊಂದಲವುಂಟಾಗಿದೆ.
ರಾಜ್ಯದ ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಹಲವು ಕಡೆಗಳಲ್ಲಿ ಮಹಿಳೆಯರಿಗೆ ಮತ ಚಲಾಯಿಸಲು ಪ್ರತ್ಯೇಕ ಪಿಂಕ್ ಬೂತ್ ಕಲ್ಪಿಸಲಾಗಿದೆ.
ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರ ಮತ್ತು ನಕಲಿ ಗುರುತಿನ ಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆ ಮುಂದೂಡಲ್ಪಟ್ಟಿರುವುದರಿಂದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 28ಕ್ಕೆ ಮುಂದೂಡಲಾಗಿದ್ದು, 31ಕ್ಕೆ ಮತ ಎಣಿಕೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


