ಬೆಂಗಳೂರಿನ ಅಲಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ
ರಾಜಧಾನಿ ಬೆಂಗಳೂರಿನ ಅಲಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ.ಚಾಮರಾಜಪೇಟೆ, ಹನುಮಂತನಗರ, ಗಿರಿನಗರ ಮೊದಲಾದ ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.

ಬೆಂಗಳೂರು : ರಾಜಧಾನಿ ಬೆಂಗಳೂರಿನ ಅಲಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ.ಚಾಮರಾಜಪೇಟೆ, ಹನುಮಂತನಗರ, ಗಿರಿನಗರ ಮೊದಲಾದ ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.
ಮಧ್ಯಾಹ್ನದ ನಂತರ ಮೋಡ ಕವಿದ ವಾತವಾರಣ ಉಂಟಾಗಿ,ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಆದರೆ , ಮತ್ತೆ ಕೆಲವು ಕಡೆಗಳಲ್ಲಿ ಮಳೆಯಾಗಿಲ್ಲ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.ಮೆಜೆಸ್ಟಿಕ್, ಮೈಸೂರು ಬ್ಯಾಂಕ್, ಮೈಸೂರು ರಸ್ತೆ ಮೊದಲಾದ ಕಡೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ರಸ್ತೆಗಳಲ್ಲಿ ನೀರು ತುಂಬಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಜನಸಾಮಾನ್ಯರು ಪರದಾಡುವಂತಾಯಿತು.
ಲಕ್ಷದೀಪ ಮತ್ತು ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣ ಹಾಗೂ ಉತ್ತರ ಕರ್ನಾಟಕದಿಂದ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೋಡಗಳ ಸಾಲು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಲಮಳೆಯಾಗುತ್ತಿದೆ ಹಮಾಮಾನ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


