ರಾಜ್ಯ

ವಿಧಾನಸಭೆ ಮತದಾನ ಮುಕ್ತಾಯದ ಬೆನ್ನಲ್ಲೇ, ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ ಮಾಡಿದೆ.

ವಿಧಾನಸಭೆ ಮತದಾನ ಮುಕ್ತಾಯದ ಬೆನ್ನಲ್ಲೇ, ಪರಿಷತ್ ಚುನಾವಣೆಗೆ ದಿನಾಂಕ ನಿಗದಿ
ಸಂಗ್ರಹ ಚಿತ್ರ
Published On :
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ ಮಾಡಿದೆ.

ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಆರು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೊಷಣೆ ಮಾಡಿದ್ದು, ಜೂನ್ 8ರಂದು ಮತದಾನ ನಡೆಯಲಿರುವುದಾಗಿ ಕೇಂದ್ರ ಚುನಾವಣಾ ಆಯೋಗವು ಮಾಹಿತಿ ನೀಡಿದೆ. ಕರ್ನಾಟಕ ಆಗ್ನೇಯ ಶಿಕ್ಷಕರ ಮತಕ್ಷೇತ್ರ, ದಕ್ಷಿಣ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಪದವೀಧರ ಮತಕ್ಷೇತ್ರ, ಬೆಂಗಳೂರು ಪದವೀಧರ  ಮತಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಮತಕ್ಷೇತ್ರಗಳಿಗೆ ಜೂನ್ 8ರಂದು ಮತದಾನ ನಡೆಯಲಿದೆ.

ಇನ್ನು ನಾಮಪತ್ರ ಸಲ್ಲಿಕೆಗೆ ಮೇ 22 ಅಂತಿಮ ದಿನವಾಗಿದ್ದು, ಮೇ 23ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಂತೆಯೇ ಮೇ 25ರೊಳಗೆ ನಾಮಪತ್ರ ವಾಪಸ್ ಪಡೆಯಬಹುದು. 

ಜೂನ್ 8ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಜೂನ್ 12ರಂದು ಮತ ಎಣಿಕೆ ನಡೆಯಲಿದೆ. ಜೂನ್ 15ರೊಳಗೆ ಚುನಾವಣೆಯ ಸಂಪೂರ್ಣ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.