ರಾಜ್ಯ

'ರಾಜ್ಯದಲ್ಲಿ 38 ಮತ ಎಣಿಕೆ ಕೇಂದ್ರ ಸ್ಥಾಪನೆ, ಎಲ್ಲ ಕೇಂದ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ'

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಮಂಗಳವಾರ ನಡೆಯಲಿರುವ ಮತಎಣಿಕೆ ಕಾರ್ಯಕ್ಕಾಗಿ ರಾಜ್ಯದ್ಯಂತ ಒಟ್ಟು 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು...

'ರಾಜ್ಯದಲ್ಲಿ 38 ಮತ ಎಣಿಕೆ ಕೇಂದ್ರ ಸ್ಥಾಪನೆ, ಎಲ್ಲ ಕೇಂದ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ'
ಸಂಗ್ರಹ ಚಿತ್ರ
Published On :
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಮಂಗಳವಾರ ನಡೆಯಲಿರುವ ಮತಎಣಿಕೆ ಕಾರ್ಯಕ್ಕಾಗಿ ರಾಜ್ಯದ್ಯಂತ ಒಟ್ಟು 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ರಾಜ್ಯ ಚುನಾವಣಾ ಮುಖ್ಯಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಭಾನುವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಜೀವ್ ಕುಮಾರ್ ಅವರು, ಮತಎಣಿಕೆ ಕಾರ್ಯದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು. 'ಚುನಾವಣಾ ಆಯೋಗ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇಡೀ ರಾಜ್ಯದಲ್ಲಿ 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಂಗಳೂರು ನಗರದಲ್ಲಿ ನಾಲ್ಕು, ತುಮಕೂರು ಜಿಲ್ಲೆಯಲ್ಲಿ ಮೂರು, ಚಿತ್ರದುರ್ಗ, ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ತಲಾ ಎರಡರಂತೆ 33 ಚುನಾವಣಾ ಜಿಲ್ಲೆಗಳಲ್ಲಿ ಒಟ್ಟು 38 ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. 
ಅಂತೆಯೇ ನಿಗದಿಯಂತೆ ಮಂಗಳವಾರವೇ ಎಲ್ಲ ಕೇಂದ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ ಎಂದರು.
ಇನ್ನು ಮತಯಂತ್ರಗಳನ್ನು ಸಂಗ್ರಹಿಸಿಟ್ಟಿರುವ ಕೇಂದ್ರಗಳಲ್ಲಿ ಭದ್ರತೆಗಾಗಿ ಅರೆಸೇನಾ ಪಡೆ, ಕೇಂದ್ರ ಮೀಸಲು ಪಡೆಯ ಶಸ್ತ್ರ ಸಜ್ಜಿತ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಯಂತ್ರಗಳಿರುವ ಸ್ಟ್ರಾಂಗ್‌ ರೂಂಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 24 ಗಂಟೆ ಕಟ್ಟೆಚ್ಚರ ವಹಿಸಲಾಗುತ್ತದೆ. ಮತ ಎಣಿಕೆ ದಿನ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ಸಂಜೀವ್ ಕುಮಾರ್ ತಿಳಿಸಿದರು.
ಇದೇ ವೇಳೆ ಮಾತನಾಡಿದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕಮಲ್‌ಪಂತ್‌  ಅವರು, ಮಹಾನಗರಗಳಲ್ಲಿ ಕಮೀಷನರ್‌ ಗಳು, ವಲಯವಾರು ಐಜಿಪಿಗಳು, ಜಿಲ್ಲಾ ಕೇಂದ್ರಗಳಲ್ಲಿ ಎಸ್‌ಪಿಗಳು ಭದ್ರತೆಯ ನಿಗಾವಹಿಸಿದ್ದಾರೆ. ಚುನಾವಣೆಯ ಭದ್ರತೆಗಾಗಿ ಕೇಂದ್ರದಿಂದ ಬಂದಿರುವ ಅರೆ ಸೇನಾಪಡೆಯ 40 ಕಂಪನಿಗಳು ಸೇರಿ ಕೇಂದ್ರ ಮೀಸಲು ಪಡೆಯ 585 ಕಂಪನಿಗಳನ್ನು ಮತ ಎಣಿಕೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಗೆ ಬಳಸಿಕೊಳ್ಳಲಾಗುತ್ತಿದೆ. ಜತೆಗೆ ರಾಜ್ಯ ಮೀಸಲು ಪಡೆ, ಸಿಎಆರ್‌, ಡಿಎಆರ್‌ 754 ತುಕಡಿಗಳು 278 ಡಿವೈಎಸ್‌ ಪಿಗಳು, 947 ಮಂದಿ ಪೊಲೀಸ್‌ ಇನ್ಸ್‌ ಪೆಕ್ಟರ್‌ಗಳು, 5,322 ಎಎಸ್‌ಐಗಳು, 45,685 ಮುಖ್ಯಪೇದೆ-ಪೇದೆಗಳು, 26,672 ಗೃಹರಕ್ಷಕ ಸಿಬ್ಬಂದಿ ಭದ್ರತೆಯಲ್ಲಿ ತೊಡಗಲಿದ್ದಾರೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.