ರಾಜ್ಯ

ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಸತತ ಮಳೆ ಜನತೆಯಲ್ಲಿ ಸಂತಸ!

ಕಳೆದ ನಾಲ್ಕು ದಿನದಿಂದ ಕರ್ನಾಟಕದ ಹಲವೆಡೆ ಸತತ ಮಳೆಯಾಗುತ್ತಿದ್ದು ಇದು ರಾಜ್ಯದ ಜನತೆಯಲ್ಲಿ ಸಂತಸ ಮೂಡಿಸಿದೆ...

ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಸತತ ಮಳೆ ಜನತೆಯಲ್ಲಿ ಸಂತಸ!
ಭಾರೀ ಮಳೆ
Published On :
ಬೆಂಗಳೂರು: ಕಳೆದ ನಾಲ್ಕು ದಿನದಿಂದ ಕರ್ನಾಟಕದ ಹಲವೆಡೆ ಸತತ ಮಳೆಯಾಗುತ್ತಿದ್ದು ಇದು ರಾಜ್ಯದ ಜನತೆಯಲ್ಲಿ ಸಂತಸ ಮೂಡಿಸಿದೆ. ಇನ್ನು ಎರಡು ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಲಕ್ಷದೀಪ ಮತ್ತು ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣ ಹಾಗೂ ಉತ್ತರ ಕರ್ನಾಟಕದಿಂದ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೋಡಗಳ ಸಾಲು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಈ ಭಾರೀ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. 
ಇನ್ನು ಬೆಂಗಳೂರಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ತೊಂದರೆಗಳಿಗೆ ಸಿಲುಕಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುತ್ತಿದೆ. ಅಲ್ಲದೆ ರಸ್ತೆ ತುಂಬೆಲ್ಲಾ ನೀರು ಹರಿಯುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ. 
ಈ ಬಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವು ಮರಗಳು ಉರುಳಿ ಬಿದ್ದಿವೆ. ಇಂದು ಬೆಂಗಳೂರಿನ ಶಿವಾಜಿನಗರ, ವಿಧಾನಸೌಧ, ವಸಂತನಗರ ಸೇರಿದಂತೆ ವಿವಿದೆಡೆ ಮಳೆಯಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.