ಖಾತೆ ತೆರೆದ ಪಕ್ಷೇತರರು; ಸವದತ್ತಿ ಯಲ್ಲಮ್ಮದಲ್ಲಿ ಆನಂದ್ ಚೋಪ್ರಾಗೆ ಮುನ್ನಡೆ
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ರಾಜಕೀಯ ಪಕ್ಷಗಳ ಅಬ್ಬರದ ನಡುವೆಯೇ ಪಕ್ಷೇತರ ಅಭ್ಯರ್ಥಿಯೊಬ್ಬರು ಮುನ್ನಡೆ ಸಾಧಿಸಿದ್ದಾರೆ.

Published On :
ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ರಾಜಕೀಯ ಪಕ್ಷಗಳ ಅಬ್ಬರದ ನಡುವೆಯೇ ಪಕ್ಷೇತರ ಅಭ್ಯರ್ಥಿಯೊಬ್ಬರು ಮುನ್ನಡೆ ಸಾಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆನಂದ್ ಚೋಪ್ರಾ ಅವರು ಮುನ್ನಡೆ ಸಾಧಿಸಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ. ಇನ್ನು ವಿಜಯಪುರದ ಬಬಲೇಶ್ವರ ಕ್ಷೇತ್ರದ ಎರೆಡನೇ ಸುತ್ತಿನ ಮತ ಎಣಿಕೆ ಮಕ್ತಾಯವಾಗಿದ್ದು, ಎರಡರಲ್ಲೂ ಕಾಂಗ್ರೆಸ್ನ ಎಂ. ಬಿ. ಪಾಟೀಲಗೆ 2024 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚಿತ್ರದುರ್ಗದ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹೊಳಲ್ಕೆರೆ ಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಹೊಸದುರ್ಗ ಕ್ಷೇತ್ರದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅಲ್ಪಮುನ್ನಡೆ ಸಾಧಿಸಿದ್ದು, ಹೊಳಲ್ಕೆರೆಯ ಎಂ.ಚಂದ್ರಪ್ಪ ಮುನ್ನಡೆ ಸಾಧಿಸಿದ್ದಾರೆ. ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಂಜನೇಯ ಅವರು ಹಿನ್ನಡೆ ಅನುಭವಿಸಿದ್ದಾರೆ.
ಇತ್ತ ಕೊಳ್ಳೆಗಾಲದಲ್ಲಿ ಬಿಎಸ್ ಪಿ ಅಭ್ಯರ್ಥಿ ಮಹೇಶ್ ಅವರೂ ಕೂಡ ಮುನ್ನಡೆ ಸಾಧಿಸಿದ್ದಾರೆ. ಕೊಳ್ಳೆಗಾಲದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BelagaviಬೆಳಗಾವಿIndependent candidateಪಕ್ಷೇತರ ಅಭ್ಯರ್ಥಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


