ರಾಜ್ಯ

ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೆಟ್ಟಿಲುಗಳಿಗೆ ನಮಸ್ಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ವಿಧಾನಸೌಧ ಪ್ರವೇಶಿಸಿದರು...

ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
Published On :
ಬೆಂಗಳೂರು: ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೆಟ್ಟಿಲುಗಳಿಗೆ ನಮಸ್ಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ವಿಧಾನಸೌಧ ಪ್ರವೇಶಿಸಿದರು. 
ರಾಜಭವನದಲ್ಲಿ ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಯಡಿಯೂರಪ್ಪ ಅವರು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದರು. ಈ ವೇಳೆ ಯಡಿಯೂರಪ್ಪ ಅವರೊಂದಿಗೆ ಬಿಜೆಪಿಯ ನಾಯಕರು ಉಪಸ್ಥಿತರಿದ್ದರು. 
ವಿಧಾನಸೌಧಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಹಾಗೂ ವಿಜಯ್ ಭಾಸ್ಕರ್ ಅವರು ಸ್ವಾಗತ ಕೋರಿದರು. 
ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯ ಮುಂಭಾಗದಲ್ಲಿದ್ದ ನಾಮಫಲಕವನ್ನು ಬದಲಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆಯಲಾಗಿದ್ದ ನಾಮಫಲಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಂದು ಬದಲಿಸಲಾಯಿತು. 
ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ ಅವರು ಅಧಿಕಾರಗಳೊಂದಿಗೆ ಸಭೆ ನಡೆಸಿ, ಮಾತುಕತೆ ನಡೆಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.