ಬಿಜೆಪಿ ಸರ್ಕಾರ ರಚನೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಭಾರತೀಯ ಜನತಾ ಪಕ್ಷ(ಬಿಜೆಪಿ) ಸರ್ಕಾರ ರಚಿಸಿರುವುದನ್ನು ವಿರೋಧಿಸಿ ವಕೀಲರೊಬ್ಬರು ಕರ್ನಾಟಕ....

Published On :
ಬೆಂಗಳೂರು: ಭಾರತೀಯ ಜನತಾ ಪಕ್ಷ(ಬಿಜೆಪಿ) ಸರ್ಕಾರ ರಚಿಸಿರುವುದನ್ನು ವಿರೋಧಿಸಿ ವಕೀಲರೊಬ್ಬರು ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, 15 ದಿನದೊಳಗೆ ಬಹುಮತ ಸಾಬೀತುಪಡಿಸಬೇಕಾಗಿದೆ.
ಈ ಮಧ್ಯೆ, ವಕೀಲ ಎನ್ ಪಿ ಅಮೃತೇಶ್ ಅವರು, ಶಾಸಕರ ರಾಜಿನಾಮೆ ಅಥವಾ ಅಡ್ಡ-ಮತದಾನ ಮಾಡುವ ಮೂಲಕ ಬಿಜೆಪಿ ಬಹುಮತ ಸಾಬೀತುಪಡಿಸಲು ಕೋರ್ಟ್ ಅವಕಾಶ ನೀಡಬಾರದು ಎಂದು ಪಿಐಎಲ್ ಸಲ್ಲಿಸಿದ್ದಾರೆ.
ಸರ್ಕಾರ ರಚಿಸಲು ಬಿಜೆಪಿ ಆಹ್ವಾನ ನೀಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರ ನಿರ್ಧಾರ ಸಂವಿಧಾನದ ಕಲಂ 10ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಐಎಲ್ ನಲ್ಲಿ ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


