ಮಾಜಿ ಪ್ರಧಾನಿಗೆ 86ನೇ ಜನ್ಮದಿನದ ಸಂಭ್ರಮ: ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ
ದೇಶದ ಮಾಜಿ ಪ್ರಧಾನಮಂತ್ರಿ 86ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು...

Published On :
ತಿರುಪತಿ: ದೇಶದ ಮಾಜಿ ಪ್ರಧಾನಮಂತ್ರಿ 86ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಪ್ರತೀ ವರ್ಷ ದೇವೇಗೌಡರು ತಮ್ಮ ಹುಟುಹಬ್ಬದ ದಿನದಂದು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆಯುವುದು ವಾಡಿಕೆ. ಅಂತೆಯೇ ಗುರುವಾರ ಸಂಜೆ ತಿರುಪತಿಗೆ ಪ್ರಯಾಣ ಬೆಳೆಸಿದ ದೇವೇಗೌಡ ಅವರು, ಶುಕ್ರವಾರ ಬೆಳಿಗ್ಗೆ ತಿರುಪತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಜೆಡಿಎಸ್ ನ ನೂತರ ಪ್ರತಿನಿಧಿಗಳು ತಂಗಿರುವ ನಗರದ ಖಾಸಗಿ ಹೋಟೆಲ್'ಗೆ ತೆರಳಿದ ದೇವೇಗೌಟ ಅವರು, ಶಾಸಕರೊಂದಿಗೆ ಮಾತುಕತೆ ನಡೆಸಿದರು. ಸದಸ್ಯರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನವನ್ನೂ ಮಾಡಿದರು.
ಬಿಜೆಪಿ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿದರೂ ಬಹುಮತ ಇಲ್ಲದ ಕಾರಣ ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚನೆ ಮಾಡುವ ಅವಕಾಶವಿದ್ದು, ಭೀತಿಗೊಳಗಾಗಬೇಕಾದ ಅಗತ್ಯವಿಲ್ಲ. ಒಗ್ಗಟ್ಟಾಗಿದ್ದರೆ, ಸರ್ಕಾರ ರಚನೆ ಮಾಡುವ ಅವಕಾಶ ಲಭಿಸಲಿದೆ. ಹೀಗಾಗಿ ಜನಪ್ರತಿನಿಧಿಗಳು ತಾಳ್ಮೆಯಿಂದ ಸಹಕರಿಸಬೇಕೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Deve GowdaJDSbirthdayಹುಟ್ಟುಹಬ್ಬತಿರುಪತಿAndhra PradeshKarnatakaಕರ್ನಾಟಕಜೆಡಿಎಸ್ಆಂಧ್ರಪ್ರದೇಶTirupatiಹೆಚ್.ಡಿ.ದೇವೇಗೌಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


